ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿನ 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ 14 ಮೇಲ್ವಿಚಾರಕರುಗಳ ಅರ್ಹ ಅಭ್ಯರ್ಥಿಗಳನ್ನು ಮೀಸಲಾತಿ ಮತ್ತು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ.
ಆಯ್ಕೆ ಪಟ್ಟಿಯನ್ನು ಅಧಿಕೃತ ವೆಬ್‍ಸೈಟ್ davanagere.nic.in ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 15 ದಿನಗಳು ಮಾತ್ರ ಅವಕಾಶ ನೀಡಲಾಗಿದೆ. ನಿಗದಿತ ಕಾಲಮಿತಿಯೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ; ಸುರೇಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.