ದಾವಣಗೆರೆ: ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆಗಾಗಿ 01- ಫಿಜಿಯೋಥೆರಪಿಸ್ಟ್‍ಗಳ ಅಗತ್ಯತೆ ಇದ್ದು ತ್ರಿಸದಸ್ಯ ಸಮಿತಿಯನ್ನು ಒಳಗೊಂಡಂತೆ ತಾತ್ಕಾಲಿಕವಾಗಿ ಕೆಲಸ ಮತ್ತು ಪಾವತಿ ಆಧಾರದ ಮೇಲೆ ನೇಮಕಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮೊ ಇನ್ ಫಿಜಿಯೋಥೆರೆಪಿಸ್ಟ್ (ಡಿಪಿಟಿ) ಅಥವಾ ಬ್ಯಾಚುಲರ್ ಆಫ್ ಫಿಜಿಯೋಥೆರಪಿಸ್ಟ್ (ಬಿ.ಪಿ.ಟಿ) ವಿದ್ಯಾರ್ಹತೆ ಹೊಂದಿದ್ದು, 2 ವರ್ಷದ ಸೇವಾ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ ಕೆಲಸ ಮತ್ತು ಪಾವತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಕೇಂದ್ರ, ಜಗಳೂರು ಇಲ್ಲಿಗೆ ನ.30 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



