ದಾವಣಗೆರೆ: ಜಿಲ್ಲೆಯ ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ -2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನತ್ಯಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತಂತೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಸದಸರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸಿಡಿ ತ್ಯಾಜ್ಯ ನಿರ್ವಹಣೆ ಸ್ವಚ್ಛ-ಸರ್ವೇಕ್ಷಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಓಡಿಎಫ್, ಓಡಿಎಫ್, ಸ್ಟಾರ್ ರೇಟಿಂಗ್ಸ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ 14 ಸದ್ಯಸರಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆಗೆ ಆಯ್ಕೆ ನಡೆಯಲಿದೆ.
ಮೇ 19 ಕೊನೆ ದಿನ
ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಯೊಂದಿಗೆ ಮೇ.19 ರೊಳಗಾಗಿ ನಿಗಧಿತ ಅರ್ಜಿ ನಮೂನೆ ಕಚೇರಿಯಿಂದ ಪಡೆದು ಪೌರಾಯುಕ್ತರು, ನಗರಸಭೆ, ಹರಿಹರ ವಿಳಾಸಕ್ಕೆ ದ್ವಿ-ಪ್ರತಿಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಶಾಖೆಯನ್ನು ಸಂಪರ್ಕಿಸಲು ಹರಿಹರ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.