Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಅಣಬೇರು ವೃತ್ತ ವ್ಯಾಪ್ತಿಯ ಗ್ರಾಮ ಸಹಾಯಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಗೆ ಫೆ. 21 ಕೊನೆ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ವಿದ್ಯಾವಂತರಾಗಿರಬೇಕು (ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು). ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು ಮತ್ತು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು. ಗ್ರಾಮಸಹಾಯಕ, ತಳವಾರರು, ತೋಟಿಗಳು, ನೀರುಗಂಟಿಗಳು, ವಾಲಿಕರ್ಸ್, ಮಹರ್ಸ್, ಬಾರಿಕರ್, ನೀರಾಡಿಗಳು, ಬಲೂತಿದಾರ್, ತಳಯಾರಿಸ್, ವೆಟಿಸ್, ಕುಲವಡಿಸ್ ಉರ್‍ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿದಾರರಿಗೆ ಕನಿಷ್ಟ 25 ವರ್ಷ ವಯಸ್ಸಾಗಿರಬೇಕು.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ಜನ್ಮ ದಿನಾಂಕದ ದಾಖಲೆ, ವಾಸಸ್ಥಳ ದೃಢೀಕರಣ, ಚುನಾವಣೆ ಗುರುತಿನ ಚೀಟಿ/ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 20 ರೂ. ಸ್ಟಾಂಪ್ ಪೇಪರ್‍ಮೇಲೆ ಸ್ವಯಂ ಘೋಷಣಾ ಪ್ರಮಾಣಪತ್ರ, ವಂಶವೃಕ್ಷ, ಒಪ್ಪಿಗೆ ಪ್ರಮಾಣಪತ್ರ, ಚಾರಿತ್ರ್ಯದ ಬಗ್ಗೆ ಪೊಲೀಸ್ ವರದಿ ಲಗತ್ತಿಸಿ ಸಲ್ಲಿಸಬೇಕು.

ಆಸಕ್ತಿಯುಳ್ಳವರು ಅಗತ್ಯ ದಾಖಲಾತಿಗಳ ವಿವರಗಳನ್ನು ಫೆ. 21 ರ ಸಂಜೆ 5-30 ರೊಳಗೆ ದಾವಣಗೆರೆ ತಾಲೂಕು ತಹಸಿಲ್ದಾರರ ಕಛೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಹಶೀಲ್ದಾರ್ ಗಿರೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top