ದಾವಣಗೆರೆ: ಗ್ರಂಥಾಲಯ ಮೇಲ್ವಿಚಾರಕರ ನೇಮಕಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಮೇಲ್ವಿಚಾರಕರ ಹುದ್ದೆಗಳಿಗೆ ತಿಂಗಳಿಗೆ 12 ಸಾವಿರ ರೂ. ಗೌರವ ಸಂಭಾವನೆ ಆಧಾರದ ಮೇಲೆ ಹಾಗೂ ನಿಗದಿಪಡಿಸಿದ ಮೀಸಲಾತಿಗನುಸಾರ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ತಾಲ್ಲೂಕಿನ ಬೇತೂರು-2ಎ (ಮಹಿಳೆ), ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ- ಸಾಮಾನ್ಯ (ಗ್ರಾಮೀಣ ಅಭ್ಯರ್ಥಿ) ಮೀಸಲಾತಿ ನಿಗದಿಪಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 14 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಟ ಎಸ್‍ಎಸ್‍ಎಲ್‍ಸಿ ಉತ್ತೀರ್ಣವಾಗಿರಬೇಕು. ಅಲ್ಲದೆ ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದವರಾಗಿರಬೇಕು, ಈ ಕುರಿತು ತಹಸಿಲ್ದಾರರಿಂದ ಪಡೆದ ರಹವಾಸಿ ಪ್ರಮಾಣಪತ್ರ ಹಾಗೂ ಸ್ಥಳೀಯ ಮತದಾರರ ಪಟ್ಟಿಯ ಭಾಗದ ಪ್ರತಿ ಸಲ್ಲಿಸಬೇಕು. ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ವಯಸ್ಕರ ಶಿಕ್ಷಣದಡಿ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ, ಉಪಪ್ರೇರಕ ಅಥವಾ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಲ್ಲಿ, ಸೇವಾ ಪ್ರಮಾಣಪತ್ರ ಸಲ್ಲಿಸಿದಲ್ಲಿ ಆದ್ಯತೆ ನೀಡಲಾಗುವುದು ಅಲ್ಲದೆ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಸೇವಾ ಪ್ರಮಾಣಪತ್ರ ಅಥವಾ ಗ್ರಂಥಾಲಯ ವಿಜ್ಞಾನ ತರಬೇತಿ ಪಡೆಯದ ಅಭ್ಯರ್ಥಿಗಳು ಇಲ್ಲದಿದ್ದಲ್ಲಿ ಎಸ್‍ಎಸ್‍ಎಲ್‍ಸಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಪಿಡಿಒ ಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಮೀಸಲಾತಿ ಪ್ರಮಾಣ ಪತ್ರ, ರಹವಾಸಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆ ಲಗತ್ತಿಸಿ, ಆಯಾ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಅಥವಾ ಪಿಡಿಒ ಅವರಿಗೆ ಮಾರ್ಚ್ 14 ರ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಯನ್ನು ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಎಸ್‍ಬಿಎಂ ಕಟ್ಟಡ, ನಿಟ್ಟುವಳ್ಳಿ ಹೊಸ ಬಡಾವಣೆ, ದಾವಣಗೆರೆ, ಮೊಬೈಲ್-8722313666 ಇವರಿಂದ ಪಡೆಯಬಹುದು ಎಂದು ಮುಖ್ಯ ಗ್ರಂಥಾಲಯ ಅಧಿಕಾರಿ ತಿಪ್ಪೇಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *