ದಾವಣಗೆರೆ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕೃಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿರುತ್ತಾರೆ. ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ Physiotherapist Grade II ಮತ್ತು Sports Masseur ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಕಛೇರಿ ವೇಳೆಯಲ್ಲಿ ಪಡೆದು, ಭರ್ತಿ ಮಾಡಿದ ನಮೂನೆಯನ್ನು ಮೇ.05 ರೊಳಗಾಗಿ ಸಲ್ಲಿಸಲು ಸೂಚಿಸಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08192 237480 ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



