Connect with us

Dvgsuddi Kannada | online news portal | Kannada news online

ದಾವಣಗೆರೆ: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟೀರಿಯಲ್) ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬೆಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ.16 ಕೊನೆಯ ದಿನವಾಗಿರುತ್ತದೆ.À್ತು ದಿನಾಂಕ 01-01-2022 ಕ್ಕೆ ವಯಸ್ಸು 18 ರಿಂದ 25 ವರ್ಷದೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 / 2557342 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top