Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಹೆಚ್‍ಡಿಬಿ ಫೈನಾನ್ಸಿಯಲ್ ‌ನಿಂದ ವಾಕ್-ಇನ್-ಇಂಟರ್ವೂವ್

ದಾವಣಗೆರೆ

ದಾವಣಗೆರೆ: ನಾಳೆ ಹೆಚ್‍ಡಿಬಿ ಫೈನಾನ್ಸಿಯಲ್ ‌ನಿಂದ ವಾಕ್-ಇನ್-ಇಂಟರ್ವೂವ್

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜು.12 ರಂದು ಬೆ.10 ಗಂಟೆಗೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಖಾಸಗಿ ಕಂಪನಿಗಳಲ್ಲಿನ ವಿವಿಧ ಹುದ್ದೆಗಳ ಆಯ್ಕೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ವಾಕ್-ಇನ್-ಇಂಟವ್ರ್ಯೂವ್‍ನಲ್ಲಿ ಹೆಚ್‍ಡಿಬಿ ಫೈನಾನ್ಸಿಯಲ್ ಸರ್ವೀಸ್ ಪ್ರೈವೇಟ್ ಲಿ,. ಇವರು ಭಾಗವಹಿಸುತ್ತಿದ್ದು, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಜು.12 ರ ಮಂಗಳವಾರ ಬೆ.10 ಗಂಟೆಗೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 08192-259446, 6361550016, 7406323294 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಗಿರೀಶ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top