Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸೆ.23 ರಂದು ನೇರ ಸಂದರ್ಶನ

ದಾವಣಗೆರೆ

ದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸೆ.23 ರಂದು ನೇರ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ವಾಕ್-ಇನ್-ಇಂಟವ್ರ್ಯೂವ್ ನಲ್ಲಿ ಖಾಸಾಗಿ ಕಂಪನಿಗಳು ಭಾಗವಹಿಸುತ್ತಿದ್ದು ಪಿಯುಸಿ, ಐಟಿಐ, ಡಿಪ್ಲೊಮೊ, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಸ್ವ ವಿವರ, ಆಧಾರ್ ಕಾರ್ಡ್ ನೊಂದಿಗೆ ವಾಕ್ ಇನ್ ಇಂಟವ್ರ್ಯೂವ್ ನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ: 08192-259446, 6361550016, 7406323294 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ್ ಕೆ.ಎನ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top