ದಾವಣಗೆರೆ: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಆಯ್ದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊಸದಾಗಿ ತೆರೆಯಲಾದ ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಿಗೆ ತಜ್ಞ ವೈದ್ಯರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಸ್ವಾಸ್ಥ್ಯ ಕ್ಲಿನಿಕ್‍ಗಳಲ್ಲಿ ಕಾರ್ಯನಿರ್ವಹಿಸುವ ತಜ್ಞವೈದ್ಯರನ್ನು ಗಂಟೆ ಅಥವಾ ದಿನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಸ್ತ್ರೀರೋಗ ತಜ್ಞರು, ಮೂಳೆ ತಜ್ಞರು, ಶಸ್ತ್ರ ಚಿಕಿತ್ಸಾ ತಜ್ಞರು, ಮಕ್ಕಳ ತಜ್ಞರು, ಚರ್ಮರೋಗ ತಜ್ಞರು, ಫಿಸಿಷಿಯನ್, ಮಾನಸಿಕ ರೋಗ ತಜ್ಞರು ಹಾಗೂ ಕಿವಿ ಮತ್ತು ಗಂಟಲು ತಜ್ಞರು Specialization ಹೊಂದಿರುವ ತಜ್ಞ ವೈದ್ಯ(MID/PG Diploma) ರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ತಜ್ಞ ವೈದ್ಯರು ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ, ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು.ಕು.ಕ.ಅಧಿಕಾರಿಗಳ ಕಛೇರಿಯ ಕೊಠಡಿ ಸಂಖ್ಯೆ:30 ಜಿಲ್ಲಾ ನಗರ ಯೋಜನಾ ನಿರ್ವಹಣಾ ಘಟಕಕ್ಕೆ ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು.ಕು.ಕ.ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.