ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ’ ದಾವಣಗೆರೆ ಇವರ ವತಿಯಿಂದ ಇಂದು (ಮೇ 31) ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿ ದೇಶಪಾಂಡೆ ಫೌಂಡೇಶನ್, ಅನ್‌ಮೋಲ್ ಪಬ್ಲಿಕ್ ಸ್ಕೂಲ್ ಹಾಗೂ ಇತರೆ ದಾವಣಗೆರೆಯ ಖಾಸಗಿ ಕಂಪನಿಗಳುಭಾಗವಹಿಸುತ್ತಿದ್ದು, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಎಂ.ಎ, ಬಿಇಡಿ, ಎಂಎಸ್ಸಿ ಬಿಇಡಿ, ಎಂ.ಕಾಂ, ಎಂಬಿಎ ಮತ್ತು ಸ್ನಾತಕೋತ್ತರ ಪದವಿವಿದ್ಯಾರ್ಹತೆ ಹೊಂದಿದ 18-30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 6361550016ಸಂಪರ್ಕಿಸಲು ಜಿಲ್ಲಾ
ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.



