Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಗಳೂರು ತಾಲ್ಲೂಕಿನ ಗುತ್ತಿದುರ್ಗ, ಮುಸ್ಟೂರು, ಚನ್ನಗಿರಿ ತಾಲ್ಲೂಕಿನ ನಲ್ಲೂರು, ಹೆಬ್ಬಳಗೆರೆ, ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ, ಬನ್ನಿಕೋಡು ಗ್ರಾಮ ಪಂಚಾಯಿತಿಗಳಲ್ಲಿ ಪುನರ್ವಸತಿ ಕಾರ್ಯಕರ್ತರ ಕೆಲಸ ಖಾಲಿ ಇದ್ದು ಮಾಸಿಕ ರೂ.9,000ಗಳ ಗೌರವಧನ ನೀಡಲಾಗುವುದು. ಆಸಕ್ತರು 18 ರಿಂದ 45 ವರ್ಷದ ವಯೋಮಾನದವರಾಗಿದ್ದು, ಆಯಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಜೂನ್.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್ ದಾವಣಗೆರೆ ದೂ.08192-263936 ಮತ್ತು 08192-263939ಗೆ ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top