ದಾವಣಗೆರೆ: ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.16 ಕೊನೆಯ ದಿನವಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08276-278963, ಜಾಲತಾಣ www.sainikschoolkodagu.edu.in ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.