Connect with us

Dvgsuddi Kannada | online news portal | Kannada news online

ದಾವಣಗೆರೆ: ಪೌರ ಕಾರ್ಮಿಕರ ವಿಶೇಷ ನೇಮಕಾತಿಯಡಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

n5329117621693369622696b2c54519a406c96180694ed96ff43fb5ec52b31971501ee978e8797ffd5d0aac

ದಾವಣಗೆರೆ

ದಾವಣಗೆರೆ: ಪೌರ ಕಾರ್ಮಿಕರ ವಿಶೇಷ ನೇಮಕಾತಿಯಡಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ದಾವಣಗೆರೆ: ಜಗಳೂರು ಪಟ್ಟಣ ಪಂಚಾಯತಿಗಳಲ್ಲಿ ನೇರ ಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆ ವಿಶೇಷ ನೇಮಕಾತಿಯಡಿ ಅರ್ಜಿ ಆಹ್ವಾನಿಸಿ, ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ.

ಅರ್ಜಿ ಸಲ್ಲಿಸಿದ ಪೌರಕಾರ್ಮಿಕರು ಸಿದ್ದ ಪಡಿಸಿದ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ ಸೈಟ್. http://davanageredudc.mrc.gov.in ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಗಳೂರು ಪಟ್ಟಣ ಪಂಚಾಯಿತಿಯ ಸೂಚನಾ ಫಲಕ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕೃತ ವೆಬ್ ಸೈಟ್‍ಗಳಲ್ಲಿ ವೀಕ್ಷಿಸಬಹುದು. ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ, ಜಗಳೂರು ಅಥವಾ ಈ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ ಸೈಟ್. http://davanageredudc.mrc.gov.in ಸಂಪರ್ಕಿಸಲು ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top