ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಪ ಕಾರ್ಯಕ್ರಮಗಳಡಿ ಪ್ರಸಕ್ತ ಸಾಲಿಗೆ ಮಂಜೂರಾಗಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಜುಲೈ 23 ರಂದು ನೇರ ಸಂದರ್ಶನದಲ್ಲಿ ಆಯ್ಕೆಯಾದವರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಈ ಕಛೇರಿಯ ಪ್ರಕಟಣಾ ಫಲಕದಲ್ಲಿ ಅ.5 ರಂದು ಪ್ರಕಟಸಲಾಗಿದೆ. ಈ ಪಟ್ಟಿಗೆ ಯಾವುದೇ ಆಕ್ಷೇಪಣಿಗಳಿದ್ದಲ್ಲಿ, ಸಮರ್ಥನಿಯ ದಾಖಲೆಗಳ ಜೊತೆಗೆ ಲಿಖಿತ ಆಕ್ಷೇಪಣೆಗಳನ್ನು ಪ್ರಕಟಣೆಗೊಂಡ 14 ದಿನಗಳೊಳಗೆ ಈ ಕಚೇರಿಯ ಎನ್.ಹೆಚ್.ಎಂ ವಿಭಾಗಕ್ಕೆ ಸಲ್ಲಸಲು ಡಿಹೆಚ್‍ಓ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.



