Connect with us

Dvgsuddi Kannada | online news portal | Kannada news online

ನಾನು ಜಾತಿಗಣತಿ ಪರ; ಮುಂದಿನ ಕ್ಯಾಬಿನೆಟ್​ನಲ್ಲಿ ಜಾತಿಗಣತಿ ವರದಿ ಬಗ್ಗೆ ಚರ್ಚೆ; ದಾವಣಗೆರೆ ಕನಕದಾಸರ ಜಯಂತಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

davangere kanaka jayanti

ಪ್ರಮುಖ ಸುದ್ದಿ

ನಾನು ಜಾತಿಗಣತಿ ಪರ; ಮುಂದಿನ ಕ್ಯಾಬಿನೆಟ್​ನಲ್ಲಿ ಜಾತಿಗಣತಿ ವರದಿ ಬಗ್ಗೆ ಚರ್ಚೆ; ದಾವಣಗೆರೆ ಕನಕದಾಸರ ಜಯಂತಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ: ನಾನು ಜಾತಿ ಜನಗಣತಿ ಪರವಾಗಿದ್ದು, ಮುಂದಿನ ಕ್ಯಾಬಿನೆಟ್​ನಲ್ಲಿ ಕಾಂತರಾಜ ವರದಿ ಚರ್ಚಿಸಲಾಗುವುದು ಎಂದು ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

537ನೇ ಕನಕ ಜಯಂತಿ ಉದ್ಘಾಟಿಸಿ ಮಾತನಾಡಿದರು. ಕನಕದಾಸರ 500 ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠ , ಮಠವನ್ನು ರೂಪಿಸಿದ್ದು ನಾನೇ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ. ಅವರು ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದರು.

ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಕಾರಣದಿಂದ ನನಗೆ ಮುಖ್ಯಮಂತ್ರಿ ಅಗುವ ಅವಕಾಶ ಸಿಕ್ಕಿತು ಎಂದರು. ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ, ಧರ್ಮ, ಅಂತಸ್ತಿವರಿಗೂ ಒಂದೇ ಮತ. ಈ ಸಮಾನತೆ ಆರ್ಥಿಕವಾಗಿ, ಸಾಮಾಜಿಕವಾಗಿಯೂ ಜಾರಿ ಆಗಬೇಕು. ಆಗ ಮಾತ್ರ ಸಮಾನತೆ ದಿಕ್ಕಿನಲ್ಲಿ ನಾವು ಮುನ್ನಡೆಯಲು ಸಾಧ್ಯ ಎಂದರು.

ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ. ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ಮಾಡುವವರನ್ನು ನಾನು ವಿರೋಧಿಸುತ್ತೇನೆಯೇ ಹೊರತು ಅವರನ್ನೂ ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ ಎಂದು ವಿವರಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top