ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ಜಿಲ್ಲಾಡಳಿತ ಭವನದಲ್ಲಿ ‘ಕನ್ನಡಕ್ಕಾಗಿ ನಾವು’ ಅಭಿಯಾನ ಅಂಗವಾಗಿ ಗೀತಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
1000ಕ್ಕೂ ಹೆಚ್ಚು ಅಧಿಕಾರಿಗಳು, 600 ಕ್ಕೂ ಹೆಚ್ಚು ವಿವಿಧ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಏಕಕಾಲದಲ್ಲಿ ವಿವಿಧ ಕನ್ನಡ ಹಾಡುಗಳನ್ನು ಹಾಡಿದರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ವಿಜಯ ಮಹಾಂತೇಶ ದಾನಮ್ಮನವರ್ ಕನ್ನಡಕ್ಕಾಗಿ ಸಂಕಲ್ಪ ಮಾಡಿಸಿದರು.
ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವೀಚಂದ್ರ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಅಪಾರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಡಿಹೆಚ್ ಓ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



