ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿ ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸಿದ್ದು, ಜಿಲ್ಲಾ ಮಟ್ಟದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ.
ಸ್ಪರ್ಧೆಯಲ್ಲಿ ಅನ್ಯ ಭಾಷೆಯ ಪದಗಳನ್ನು ಬಳಸದೆ ನಾಡು-ನುಡಿಗೆ ಸಂಬಂಧಿಸಿದಂತೆ 3 ರಿಂದ 4 ನಿಮಿಷಗಳ ಕಾಲ ಶುದ್ಧ ಕನ್ನಡದಲ್ಲಿ ಮಾತನಾಡಬೇಕು. ಸಾರ್ವಜನಿಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದು ಹಾಗೂ ಆಸಕ್ತರು https://forms.gle/CRfQAZonSGQh83Sf7 ಗೂಗಲ್ ಲಿಂಕ್ ಮೂಲಕ ಭಾಗವಹಿಸಬಹುದಾಗಿದೆ.
ಸ್ಪರ್ಧೆಗೆ ಜಿಲ್ಲಾ ಮಟ್ಟದಲ್ಲಿ ಮೊದಲ ಬಹುಮಾನ 5 ಸಾವಿರ, ದ್ವಿತೀಯ-3 ಸಾವಿರ ಹಾಗೂ ತೃತೀಯ ಬಹುಮಾನ 2 ಸಾವಿರ ರೂ.ಗಳನ್ನು ನಿಗದಿಗೊಳಿಸಲಾಗಿದೆ. ಜಿಲ್ಲಾ ಹಂತದಲ್ಲಿ ಸರ್ಕಾರವು ಮೌಲ್ಯಮಾಪನ ಸಮಿತಿಯನ್ನು ನಿಗದಿಗೊಳಿಸಿದ್ದು, ಈ ಸಮಿತಿಯು ವಿಜೇತರನ್ನು ಆಯ್ಕೆ ಮಾಡುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



