ಬೆಂಗಳೂರು: ಇಂದಿನಿಂದ ಎರಡು ದಿನ ಹರಿಹರದ ಪಂಚಮಸಾಲಿ ಗುರು ಪೀಠದಲ್ಲಿ ನಡೆಯಲಿರುವ ಹರಜಾತ್ರಾ ಮಹೋತ್ಸವಕ್ಕೆ ಸಿ.ಎಂ. ಬಿಎಸ್. ಯಡಿಯೂರಪ್ಪ ಆಗಮಿಸಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಶಂಕರ್ ಪಾಟೀಲ್ ಮುನೆನಕೊಪ್ಪ ಕಾರ್ಯಕ್ರಮಕ್ಕೆ ಹಾಜರಿದ್ದಾರೆ.ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ಧಾರೆ. ಜಾತ್ರೆಗೆ ಆಗಮಿಸಿದ ಸಚಿವ ಮುರುಗೇಶ್ ನಿರಾಣಿ ಯಡಿಯೂರಪ್ಪ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದರು.



