Connect with us

Dvgsuddi Kannada | online news portal | Kannada news online

ದಾವಣಗೆರೆ: 7ನೇ ವೇತನ ಆಯೋಗ, ಹಳೆ ಪಿಂಚಣಿ ಯೋಜನೆ ಜಾರಿ ಆಗ್ರಹಿಸಿ ಎಲ್ಲಾ ಸರ್ಕಾರಿ ನೌಕರರು ಮಾ.01 ರಂದು ಮುಷ್ಕರದಲ್ಲಿ ಭಾಗವಹಿಸಿ; ಬಿ.ಪಾಲಾಕ್ಷಿ

ದಾವಣಗೆರೆ

ದಾವಣಗೆರೆ: 7ನೇ ವೇತನ ಆಯೋಗ, ಹಳೆ ಪಿಂಚಣಿ ಯೋಜನೆ ಜಾರಿ ಆಗ್ರಹಿಸಿ ಎಲ್ಲಾ ಸರ್ಕಾರಿ ನೌಕರರು ಮಾ.01 ರಂದು ಮುಷ್ಕರದಲ್ಲಿ ಭಾಗವಹಿಸಿ; ಬಿ.ಪಾಲಾಕ್ಷಿ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸಿ ಮಾರ್ಚ್ 1ರಿಂದ ಕೆಲಸಕ್ಕೆ ಗೈರು ಆಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಮಾನುಸಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗವಹಿಸಬೇಕು ಎಂದು ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಾಲಾಕ್ಷಿ ತಿಳಿಸಿದರು.

ಸುದ್ದಿಗೋಷ್ಟಿ ಮಾಹಿತಿ ನೀಡಿದ ಅವರು, ಫೆಬ್ರವರಿ 21ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು- ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022ರ ಜುಲೈ 1ರಿಂದ ಜಾರಿಗೊಳಿಸಬೇಕಾಗಿತ್ತು. ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ರಾವ್‌ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತ್ರತ ವರದಿಯನ್ನು ಸಿದ್ದಪಡಿಸಿದೆ.

ರಾಜ್ಯ ಸರ್ಕಾರದ ಅಧಿಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಅವರ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top