Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ KAS ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

free training

ದಾವಣಗೆರೆ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ KAS ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಎಂ ತಾಂತ್ರಿಕ ಮಹಾವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಕೆ.ಎ.ಎಸ್. ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ.

ಅಭ್ಯರ್ಥಿಗಳಿಗೆ ಜುಲೈ 17 ರಿಂದ 26 ರವರೆಗೆ ರೂಂ ನಂ:104, 3ನೇ ಮಹಡಿ, ಇಂಜಿನಿಯರಿಂಗ್ ಬ್ಲಾಕ್, ಜಿಎಂ ತಾಂತ್ರಿಕ ಮಹಾವಿದ್ಯಾಲಯ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ “ಉಚಿತ ಪರೀಕ್ಷಾಪೂರ್ವ ತರಬೇತಿ” ಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ದಿನಾಂಕ : 17-07-2023ರ ಬೆಳಿಗ್ಗೆ 10-00 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 7406323294 & 8618166204 ಯನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top