ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾದ ಬಿ.ವಾಮದೇವಪ್ಪ ಅವರು, ಮಾ. 29 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಮೇ 09 ರಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿರುವ ಬಿ.ವಾಮದೇವಪ್ಪ ಅವರು ಮಾ.29 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಶ್ಯಾಗಲೆ ಸದಾಶಿವಪ್ಪ ಅವರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ದಾವಣಗೆರೆ ತಾಲೂಕು ಕಚೇರಿಯಲ್ಲಿ ಕ.ಸಾ.ಪ. ಜಿಲ್ಲಾ ಚುನಾವಣಾಧಿಕಾರಿಗೆ ಬಿ.ವಾಮದೇವಪ್ಪ ಅವರು ನಾಮಪತ್ರ ಸಲ್ಲಿಸುವರು. ಈ ವೇಳೆ ದಾವಣಗೆರೆಯ ಹಿರಿಯ ಸಾಹಿತಿಗಳು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್.ಟಿ.ಶಾಂತಗಂಗಾಧರ್ ಅವರು ಸಾಥ್ ನೀಡಲಿದ್ದಾರೆ.



