ದಾವಣಗೆರೆ: 11 ನೇ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 26 ಮತ್ತು 27 ರಂದು ಎಲೆಬೇತೂರಿನಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.
ಪೆಬ್ರವರಿ 24 ಮತ್ತು 25 ರಂದು ಬೆಂಗಳೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯಲ್ಲಿ 2021-22 ರ ಸಾಲಿನ ಜಿಲ್ಲಾ ಸಮ್ಮೇಳನಗಳನ್ನು ಮಾರ್ಚ್ ಅಂತ್ಯದೊಳಗೆ ಆಯೋಜಿಸುವಂತೆ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿಯವರು ಸೂಚಿಸಿರುವಂತೆ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು ಎಂದು ಬಿ.ವಾಮದೇವಪ್ಪ ಅವರು ತಿಳಿಸಿದರು.
ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಜಿಲ್ಲೆಯ ಹಿರಿಯ ಮಹಿಳಾ ಸಾಹಿತಿ, ಲೇಖಕಿ, ಕಾದಂಬರಿಗಾರ್ತಿ, ಕಥೆಗಾರ್ತಿ ಜಿ.ಎಸ್.ಸುಶೀಲಾದೇವಿ ಆರ್. ರಾವ್ ಅವರನ್ನು ಸರ್ವಾನುಮತದಿಂದ ಕಾರ್ಯಕಾರಿ ಸಮಿತಿ ಸದಸ್ಯರು ಆಯ್ಕೆ ಮಾಡಿದರು. ಹಾಗೆಯೇ ಎಲೆಬೇತೂರಿಗೆ ಜಿಲ್ಲಾ ಕಸಾಪ ನಿಯೋಗ ತೆರಳಿ ಸಮ್ಮೇಳನ ನಡೆಯುವ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಹಿರಿಯರ, ಮುಖಂಡರ, ಜನಪ್ರತಿನಿಧಿಗಳ ಜೊತೆಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಸಮ್ಮೇಳನದ ಸ್ಥಳವನ್ನು ನಿಗದಿಪಡಿಸಲು ತೀರ್ಮಾನಿಸಲಾಯಿತು.
ಎಲೆಬೇತೂರಿನಲ್ಲಿ ನಡೆಯುವ 11 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ ಸ್ಮರಣ ಸಂಚಿಕೆಯನ್ನು ಪ್ರಕಟಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸುದೀರ್ಘವಾದ ಚರ್ಚೆಯ ತರುವಾಯ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷರಾದ ಲಯನ್ ಎ.ಆರ್.ಉಜ್ಜನಪ್ಪ ಅವರ ಗೌರವ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ಹೊರತರಲು ತೀರ್ಮಾನಿಸಲಾಯಿತು ಹಾಗೂ ಸ್ಮರಣ ಸಂಚಿಕೆಯ ಸಂಪಾದಕರಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಸಹ ಸಂಪಾದಕರಾಗಿ ಶಿಕ್ಷಕ ಜಗದೀಶ್ ಸಿ.ಜಿ.ಕೂಲಂಬಿ, ಸಂಪಾದಕ ಮಂಡಳಿ ಸದಸ್ಯರಾಗಿ ಬಾ.ಮ.ಬಸವರಾಜಯ್ಯ, ಕೆ.ರಾಘವೇಂದ್ರ ನಾಯರಿ, ಸುಮತಿ ಜಯಪ್ಪ, ಎಸ್.ಎಂ.ಮಲ್ಲಮ್ಮ, ಜ್ಯೋತಿ ಎನ್.ಉಪಾಧ್ಯಾಯ, ರುದ್ರಾಕ್ಷಿ ಬಾಯಿ ಪುಟ್ಟಾ ನಾಯ್ಕ್ ಮತ್ತು ವೀಣಾ ಕೃಷ್ಣಮೂರ್ತಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಮ್ಮೇಳನದಲ್ಲಿ ಆಯೋಜಿಸುವ ಗೋಷ್ಠಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಸಮಿತಿಯನ್ನು ರಚಿಸಿ ಸಮಿತಿ ಸದಸ್ಯರನ್ನಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಎಸ್.ಬಿ.ರಂಗನಾಥ್ ಮತ್ತು ಡಾ.ಎಮ್.ಜಿ.ಈಶ್ವರಪ್ಪ, ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್.ಮಂಜುನಾಥ ಕುರ್ಕಿ, ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ, ಪ್ರೊ.ಎ.ಬಿ.ರಾಮಚಂದ್ರಪ್ಪ, ಪ್ರೊ.ದಾದಾಪೀರ್ ನವಿಲೇಹಾಳ್, ಬಾ.ಮ.ಬಸವರಾಜಯ್ಯ, ಪತ್ರಕರ್ತ ಬಿ.ಎನ್.ಮಲ್ಲೇಶ್, ಪತ್ರಕರ್ತ ಜಿ.ಎಮ್ ಆರಾಧ್ಯ ಇವರುಗಳನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಥಮ ದಿನ ನಡೆಯುವ ಮೆರವಣಿಗೆಯಲ್ಲಿ ಭಾಗವಹಿಸುವ ಕಲಾ ತಂಡಗಳ ಆಯೋಜನೆಯ ಜವಾಬ್ದಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಅವರಿಗೆ ವಹಿಸಲಾಯಿತು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ.ಹೆಚ್.ಎಸ್. ಮಂಜುನಾಥ್ ಕುರ್ಕಿ, ಮಾಜಿ ಅಧ್ಯಕ್ಷ ಲಯನ್ ಎ.ಆರ್.ಉಜ್ಜನಪ್ಪ, ಪದನಿಮಿತ್ತ ಕಾರ್ಯಕಾರಿ ಸಮಿತಿ ಸದಸ್ಯರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಜಿಲ್ಲಾ ವಾರ್ತಾಧಿಕಾರಿ ಡಿ.ಅಶೋಕ ಕುಮಾರ್, ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ, ತಾಲೂಕು ಅಧ್ಯಕ್ಷರುಗಳಾದ ಸುಮತಿ ಜಯಪ್ಪ, ಎಲ್.ಜಿ.ಮಧುಕುಮಾರ್, ಡಿ.ಎಂ.ಮಂಜುನಾಥಯ್ಯ, ಮುರಿಗೆಪ್ಪ ಗೌಡ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಎಸ್.ಎಂ.ಮಲ್ಲಮ್ಮ, ಜ್ಯೋತಿ ಎನ್.ಉಪಾಧ್ಯಾಯ, ರುದ್ರಾಕ್ಷಿ ಬಾಯಿ ಪುಟ್ಟಾನಾಯ್ಕ್, ಎನ್.ಎಸ್.ರಾಜು ಮತ್ತಿತರರು ಭಾಗವಹಿಸಿದ್ದರು.