ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 1 ರಂದು ಬೆಳಿಗ್ಗೆ 11.30ಕ್ಕೆ ನಗರದ ಶ್ರೀಮದ್ ಅಭಿನವ ರೇಣುಕಾ ಮಂದಿರದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಗಣಿ ಮತ್ತು ಭೂವಿಜ್ಞಾನ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮದ ಸಚಿವರಾದ ಶರಣಬಸಪ್ಪ ದರ್ಶನಾಪೂರ ಇವರು ಮಳಿಗೆ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಬಸನಗೌಡ ತುರುವಿಹಾಳ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಡಾ. ಪ್ರಭಾ ಮಲ್ಲಿಕಾರ್ಜುನ್, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಹರಿಹರ ಶಾಸಕ ಬಿ.ಪಿ. ಹರೀಶ್, ಮಾಯಕೊಂಡ ಶಾಸಕ ಕೆ.ಎಸ್ .ಬಸವಂತಪ್ಪ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ .ಬೋಜೇಗೌಡ, ಡಿ.ಎಸ್ ಅರುಣ್, ಚಿದಾನಂದ ಎಂ.ಗೌಡ, ಕೆ.ಎಸ್ ನವೀನ್, ಡಿ.ಟಿ.ಶ್ರೀನಿವಾಸ್, ಕೆ. ಅಬ್ದುಲ್ ಜಬ್ಬಾರ್, ಡಾ.ಧನಂಜಯ ಸರ್ಜಿ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಬಂಜಾರ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ,
ಎಂ.ಎಸ್.ಎಂ.ಇ ಗಣಿ ಮತ್ತು ಭೂವಿಜ್ಞಾನ ಜವಳಿ ಮತ್ತು ಸಕ್ಕರೆ ವಾಣಜ್ಯ, ಕೈಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಸಮೀರ್ ಶುಕ್ಲಾ, ಸೂಕ್ಷ್ಮ ಸಣ್ಣ ಮತ್ತು ಮಾಧ್ಯಮ ಕೈಗಾರಿಕೆಗಳು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರಾದ ನಿಯೇಶ್.ಕೆ.ಪಾಟೀಲ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲ್‍ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪಾಲ್ಗೊಳುವರು.



