ದಾವಣಗೆರೆ: ಪ್ರಸಕ್ತ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ನೀಡಲು ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿಗೆ ಪರಿಗಣಿಸಲು ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾರು ಅರ್ಹರು: ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯರಸ್ತೆ, ಕುವೆಂಪು ನಗರ, ಎಂ.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಪಡೆದು ಭರ್ತಿಮಾಡಿ ದ್ವಿ-ಪ್ರತಿಯಲ್ಲಿ ಫೆಬ್ರವರಿ 5 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-264056 ಸಂಪರ್ಕಿಸಲು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.



