Connect with us

Dvgsuddi Kannada | online news portal | Kannada news online

ದಾವಣಗೆರೆ: ಕೆಎಂಎಫ್ ನಿಂದ 2,250 ರೂ. ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ; ನೋಂದಣಿ ಪ್ರಕ್ರಿಯೆ ಆರಂಭ

ದಾವಣಗೆರೆ

ದಾವಣಗೆರೆ: ಕೆಎಂಎಫ್ ನಿಂದ 2,250 ರೂ. ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ; ನೋಂದಣಿ ಪ್ರಕ್ರಿಯೆ ಆರಂಭ

ದಾವಣಗೆರೆ: ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್‍ಗೆ ರೂ.2250/- ರ ಬೆಲೆಯಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, ಫ್ರೂಟ್ಸ್ (FRUTTS) ತಂತ್ರಾಂಶದಲ್ಲಿ ನೋಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದಾಗಿದೆ.

ಕಹಾಮ ಶಿಕಾರಿಪುರ ಪಶು ಆಹಾರ ಘಟಕಕ್ಕೆ ಅವಶ್ಯವಿರುವ 30000 ಮೆ.ಟನ್ ಮೆಕ್ಕೆಜೋಳವನ್ನು ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಪ್ರದೇಶದ ರೈತರುಗಳಿಂದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ಧಪಡಿಸಿರುವ ಫ್ರೂಟ್ಸ್ ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರಲಾಗುವುದು.

ಪ್ರತಿ ಒಬ್ಬ ರೈತರಿಂದ ಗರಿಷ್ಠ 1000 ಕ್ವಿಂಟಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಿದ್ದು, ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ರೈತರೇ ನೇರವಾಗಿ ಉತ್ತಮ ಗುಣಮಟ್ಟದ ಮೆಕ್ಕೆಜೋಳವನ್ನು ತಲಾ ಐವತ್ತು ಕೆ.ಜಿ ತೂಕದಂತೆ ಉತ್ತಮ ಗುಣಮಟ್ಟದ ಗೋಣಿಚೀಲಗಳಲ್ಲಿ ಸರಬರಾಜು ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9606012571 ಮತ್ತು ಇಮೇಲ್ ವಿಳಾಸ : kmfcfps@gmail.com ನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ಕ.ಹಾ.ಮ ಪಶು ಆಹಾರ ಘಟಕದ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top