ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಸ್ಕೌಟ್ಸ್ – ಗೈಡ್ಸ್ ಮತ್ತು ರೋವರ್ಸ್ – ರೇಂಜರ್ಸ್ ರಾಜ್ಯ ಮಟ್ಟದ ಪದಕ ತರಬೇತಿ ಶಿಬಿರ ಹಾಗೂ ಕೇಂದ್ರ ಮಾಜಿ ಸಚಿವ ಕೊಂಡಜ್ಜಿ ಬಸಪ್ಪ ಅವರ 39ನೇ ಸ್ಮರಣೆ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಸದ ಜಿ.ಎಂ.ಸಿದ್ದೇಶ್ವರ ಭಾಗವಹಿಸಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪಿ.ಜಿ.ಆರ್ ಸಿಂಧ್ಯಾ, ಎಂಎಲ್ ಸಿ ಮೋಹನ್ ಕೊಂಡಜ್ಜಿ, ಭಾರತ್ ಸ್ಕೌಟ್ಸ್ ಗೈಡ್ಸ್ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೊಂಡಜ್ಜಿ ಬಸಪ್ಪ ಅವರು ಸಂಸದರಾಗಿ ಕೇಂದ್ರ, ರಾಜ್ಯ ಸಚಿವರಾಗಿ ಹಾಗೂ ಸ್ಕೌಟ್ಸ್ – ಗೈಡ್ಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ ಸಮಾಜ ಸೇವೆ, ಪಂಚಾಯತ್ ರಾಜ್ ಸ್ಥಾಪನೆಯಲ್ಲಿ ಹಾಗೂ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಸೇವೆ ಸಲ್ಲಿಸಿ ರಾಜ್ಯ ಹಾಗೂ ಜಿಲ್ಲೆಗೆ ಮಾದರಿ ರಾಜಕಾರಣಿಯಾಗಿ ಬದುಕಿದ್ದರು.



