Connect with us

Dvgsuddi Kannada | online news portal | Kannada news online

ಕೊಂಡಜ್ಜಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ‌ದ ಹುಂಡಿ ಕಳವು

images 19

ದಾವಣಗೆರೆ

ಕೊಂಡಜ್ಜಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ‌ದ ಹುಂಡಿ ಕಳವು

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ‌‌ ಒಡೆದು, ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಮುಜರಾಯಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಗೇಟಿನ ಬೀಗ ಮುರಿದು ಒಳ‌ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿ ಒಡೆದು 30 ಸಾವಿರದಷ್ಟು ಹಣವನ್ನು ದೊಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಗ್ರಾಮದ ಸಹಾಯಕ ಕುಮಾರಸ್ವಾಮಿ ನೀಡಿದ ಮಾಹಿತಿ ಮೇರೆಗೆ ಗ್ರಾಮ ಲೆಕ್ಕಾಧಿಕಾರಿ ಎ.ಎಂ. ಲೋಹಿತ್, ರಾಜಸ್ವ ನಿರೀಕ್ಷಕ ಸಮೀರ್  ಅವರು ಸ್ಥಳಕ್ಕೆ ಬಂದು ಮಹಜರ್ ಮಾಡಿ, ತಾಲ್ಲೂಕು ಕಚೇರಿಗೆ‌‌‌ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top