ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕು ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಪೋಲಿಸ್ ಇಲಾಖೆ ಹಾಗೂ ಕಾರ್ಗಿಲ್ ಕಂಪನಿಯ ಸಹಯೋಗದಲ್ಲಿ ಫಿಟ್ ಫಾರ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು.
ಹಾಕಿ ಮಾಂತ್ರಿಕ ಧ್ಯಾನ್ ಚಂದ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇಂದು( ಆ.31)ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಡಿ ವೈ ಎಸ್ ಪಿ ಪ್ರಕಾಶ್ ಪಿ ಬಿ ಮಾತನಾಡಿ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವು ತುಂಬಾ ಮುಖ್ಯ ಆದ್ದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆ ಗಮನ ಕೊಡಬೇಕು. ಹಾಗಾಗಿ ಈ ರೀತಿಯ ಮ್ಯಾರಥಾನ್ ಗಳು ತುಂಬಾ ಮುಖ್ಯ ಎಂದು ತಿಳಿದರು.
ಕಾರ್ಯಕ್ರಮದಲ್ಲಿ ಕಾರ್ಗಿಲ್ ಕಂಪನಿಯ ಕಾರ್ಯದರ್ಶಿಗಳಾದ ವೆಂಕಟೇಶ್ ಮಾತನಾಡಿ. ವಿಶ್ವಕ್ಕೆ ಭಾರತವನ್ನು ಪರಿಚಯಿಸಿದ ಮೇರು ವ್ಯಕ್ತಿತ್ವ ಧ್ಯಾನ್ ಚಂದ್ ಅವರ ಜೀವನ ಒಂದು ಯಶೋಗಾದೆ. ಮಕ್ಕಳು ಅವರಂತೆ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಧನೆಯೆಡೆಗೆ ಮುನ್ನುಗ್ಗಬೇಕೆಂದು ತಿಳಿಸಿದರು.
ಪೊಲೀಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಯತೀಶ್ ಆಚಾರ್ ಮಾತನಾಡಿ, ಹಾಕಿ ಕ್ರೀಡೆಯಲ್ಲಿ ಬ್ರಿಟಿಷ್ ಅಧಿಪತ್ಯದ ಕಾಲದಲ್ಲಿ ಭಾರತವನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಹಾಕಿ ಮಾಂತ್ರಿಕ ಧ್ಯಾನ್ ಚಂದ ಸಲ್ಲುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಕುಪ್ಪೇಲೂರು, ಕಾರ್ಗಿಲ್ ಕಂಪನಿಯ ಕವನ್, ಪೊಲೀಸ್ ಸಿಬ್ಬಂದಿ ಮಾರುತಿ, ಗಂಗಾಧರ, ವಿದ್ಯಾರ್ಥಿಗಳ ಪೋಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಶಾಲೆಯ ಬೋಧಕ ಮತ್ತು ಬೋಧಕೇತರ ಸಂಬಂಧಿ ಉಪಸ್ಥಿತರಿದ್ದರು.