ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಹೆಜ್ಜೇನು ದಾಳಿ ಮಾಡಿದ್ದು, ಶಾಲಾ ಮಕ್ಕಳು ಮತ್ತು ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ, ಮಕ್ಕಳು ಮತ್ತು ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ.
ಪೊಲೀಸ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಹೆಜ್ಜೇನು ಗೂಡು ಕಟ್ಟಿತ್ತು. ಏಕಾಏಕಿ ಹೆಜ್ಜೇನುಗಳು ಗೂಡಿನಿಂದ ಹಾರಿ ದಾಳಿ ಮಾಡಲು ಮುಂದಾಗಿದ್ದವು. ಕೂಡಲೇ ಶಾಲೆ ಸಿಬ್ಬಂದಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆಗ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮ ದಳ ಸಿಬ್ಬಂದಿ, ಮಕ್ಕಳು ಹಾಗೂ ಸಿಬ್ಬಂದಿಯನ್ನು ಹೆಜ್ಜೇನು ದಾಳಿಯಿಂದ ಪಾರು ಮಾಡಿದ್ದಾರೆ. ಘಟನೆಯಲ್ಲಿ ಸಿಬ್ಬಂದಿ ಮತ್ತು ಮಕ್ಕಳಿಗೆ ಯಾವುದೇ ತೊಂದರೆ ಆಗಿಲ್ಲ. ಕೆಲ ಹೊತ್ತು ಪೋಷಕರಲ್ಲಿ ಆತಂಕ ಉಂಟಾಗಿತ್ತು.