Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿ.16, 17ರಂದು ಲೆಕ್ಕ ಪರಿಶೋಧನೆ, ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ಹುದ್ದೆಗೆ ಪರೀಕ್ಷೆ

kpsc

ದಾವಣಗೆರೆ

ದಾವಣಗೆರೆ: ಡಿ.16, 17ರಂದು ಲೆಕ್ಕ ಪರಿಶೋಧನೆ, ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ಹುದ್ದೆಗೆ ಪರೀಕ್ಷೆ

ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 16 ಮತ್ತು 17 ರಂದು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಈ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸುಗಮವಾಗಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಸೂಚಿಸಿದರು.

ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿ.16 ರಂದು ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 27 ಅಭ್ಯರ್ಥಿಗಳು ಮತ್ತು ಡಿ.17 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮತ್ತು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 1680 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಿಳಿಸಿದರು.

ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‍ಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸಬಾರದು ಎಂದು ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್.ಜಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ, ಜಿಲ್ಲಾ ಖಜಾನೆ ಅಧಿಕಾರಿ ಪ್ರಭಾವತಿ ಹಾಗೂ ಡಿ.ಎಸ್.ಪಿ ರುದ್ರಪ್ಪ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top