Connect with us

Dvgsuddi Kannada | online news portal | Kannada news online

ವಿದ್ಯುತ್ ದರ ಏರಿಕೆ ಶಾಕ್; ಅ.1 ರಿಂದ ಇಂಧನ ಹೊಂದಣಿಕೆ ಶುಲ್ಕ ಹೆಚ್ಚಿಸಿದ ಕೆಇಆರ್‌ಸಿ

ಪ್ರಮುಖ ಸುದ್ದಿ

ವಿದ್ಯುತ್ ದರ ಏರಿಕೆ ಶಾಕ್; ಅ.1 ರಿಂದ ಇಂಧನ ಹೊಂದಣಿಕೆ ಶುಲ್ಕ ಹೆಚ್ಚಿಸಿದ ಕೆಇಆರ್‌ಸಿ

ಬೆಂಗಳೂರು: ಕಲ್ಲಿದ್ದಲು ಖರೀದಿ ದರ ಹೆಚ್ಚಳವಾಗಿದ್ದರಿಂದ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ ‌1 ರಿಂದ ಮುಂದಿನ 6 ತಿಂಗಳ ಅವಧಿಗೆ ದರ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಆದೇಶ ಹೊರಡಿಸಿದೆ. ಇಂಧನ ಹೊಂದಾಣಿಕೆ ಶುಲ್ಕ 43 ಪೈಸೆ ಹೆಚ್ಚಿಸಲಾಗಿದೆ. ಈ ದರ ಮುಂದಿನ 6 ತಿಂಗಳ ಅವಧಿಗೆ ಗ್ರಾಹಕರಿಂದ ಸಂಗ್ರಹಿಸಲು ಬೆಸ್ಕಾಂಗೆ ಅನುಮತಿ ನೀಡಿದೆ. 2013 ರ ಅನ್ವಯ ಇಂಧನ ಹೊಂದಾಣಿಕೆ ಶುಲ್ಕವನ್ನು 43 ಪೈಸೆ ಹೆಚ್ಚಳ ಮಾಡಿ ಬೆಸ್ಕಾಂಗೆ ಅನ್ವಯ ಆಗುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಕೇಂದ್ರ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (CGS), ಕರ್ನಾಟಕ ವಿದ್ಯುಚ್ಛಕ್ತಿ ಉತ್ಪಾದನಾ ಕೇಂದ್ರ (KPCL)ಮತ್ತು ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್ (UPCL) ನಿಂದ ಎಲ್ಲಾ ಎಸ್ಕಾಂಗಳು ವಿದ್ಯುತ್‌ ಖರೀದಿಸುತ್ತಿವೆ. ಏಪ್ರಿಲ್-2022 ರಿಂದ ಜೂನ್-2022 ರವರೆಗೆ 643 ಕೋಟಿ ರೂ.ಗಳಷ್ಟು ವಿದ್ಯುತ್‌ ಖರೀದಿ ವೆಚ್ಚ ಹೆಚ್ಚಳವಾಗಿದ್ದು, 80 ಪೈಸೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವನ್ನು ವಸೂಲಿ ಮಾಡಲು ಬೆಸ್ಕಾಂ ಕೆಇಆರ್‌ ಸಿಗೆ ಆಗಸ್ಟ್ 30ರಂದು ಅರ್ಜಿ ಸಲ್ಲಿಸಿತ್ತು.ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಹೆಚ್ಚವರಿ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ಈ ಶುಲ್ಕವನ್ನು ಆರು ತಿಂಗಳಿಗೆ ಅನ್ವಯಿಸುವಂತೆ ಪರಿಷ್ಕರಿಸಲಾಗಿದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು

ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆಯಾದ ಹಿನ್ನೆಲೆಯಲ್ಲಿ 43 ಪೈಸೆ ಹೆಚ್ಚಳ ಮಾಡಲಾಗಿದ್ದು, ಈ ಮೊತ್ತವನ್ನು ಅಕ್ಟೋಬರ್‌ ನಿಂದ ಮುಂದಿನ ಮಾರ್ಚ್‌ -2023ರವರೆಗೆ ಸಂಗ್ರಹಿಸಲಾಗುತ್ತದೆ ಎಂದು ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top