ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ನೀರು ಸಂಗ್ರಹಣ ಘಟಕಗಗಳಾದ ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಕೊಯ್ಲೋತ್ತರ ಸಂಸ್ಕರಣ ಘಟಕಗಳನ್ನು ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಇದರ ಸೌಲಭ್ಯ ಪಡೆಯಲು ಜಗಳೂರು ತಾಲ್ಲೂಕಿನ ರೈತರು ತೋಟಗಾರಿಕೆ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದಾಗಿರುತ್ತದೆ. ರ‍್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹೋಬಳಿ ಮಟ್ಟದ ಅಧಿಕಾರಿಗಳಾದ ಪ್ರಸನ್ನ ಕುಮಾರ್ ಜಿ ಎಚ್ 910838179 (ಕಸಬಾ), ವೆಂಕಟೇಶ್ವರ ನಾಯಕ್ ಎಲ್ . 890472145 (ಬಿಳಿಚೋಡು), ಸುನಿಲ್ ಕುಮಾರ್ ಎಚ್.ಟಿ ಇವರನ್ನು ಸಂಪರ್ಕಿಸಲು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.