ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ಫುಲ್ ರಷ್ ಆದ ಪರಿಣಾಮ, ತ್ಯಾವಣಿಗೆ ಕಡೆಯಿಂದ ದಾವಣಗೆರೆಗೆ ಬರುತ್ತಿದ್ದ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಜಾರಿ ಬಿದ್ದ ಪರಿಣಾಮ ಗಂಭೀರ ಗಾಯವಾಗಿದೆ. 7ನೇ ಮೈಲಿಕಲ್ಲಿ ಸಮೀಪ ಈ ಘಟನೆ ನಡೆದಿದ್ದು, ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲ ಬಳಿ ನಿಂತಿದ್ದ ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.
ಕುಕ್ಕವಾಡ ಗ್ರಾಮದ ಹಾಲಮ್ಮ ಬಸ್ ನಿಂದ ಕೆಳಗೆ ಬಿದ್ದ ಮಹಿಳೆಯಾಗಿದ್ದಾರೆ. ಮಹಿಳೆ ಆಯತಪ್ಪಿ ಬಿದ್ದರೂ, ಡ್ರೈವರ್ ತಕ್ಷಣವೇ ಗೊತ್ತಾಗಿಲ್ಲ, ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ. ಕೂಡಲೇ ಪ್ರಯಾಣಿಕರು ಕೂಗಾಡಿದ್ದರಿಂದ ಚಾಲಕ ಬಸ್ ನಿಲ್ಲಿಸಿದ್ದಾನೆ.ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆ ಕರೆದ್ಯೊಯಲು ಪರದಾಡುತ್ತಿದ್ದಾಗ ಅದೇ ಮಾರ್ಗದಲ್ಲಿ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಗಾಯಳು ಹಾಲಮ್ಮನನ್ನು ತಮ್ಮದೇ ವಾಹನದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ, ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಿದ್ದಾರೆ.
ಕೆಎಸ್ ಆರ್ ಟಿಸಿಗೆ ಶಕ್ತಿ ಯೋಜನೆ ಜಾರಿ ನಂತರ ಬಸ್ ಗಳಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಪ್ರಯಾಣ ಬೆಳೆಸುತ್ತಿದ್ದು, ಬಸ್ ಗಳು ಫುಲ್ ರಷ್ ಆಗುತ್ತಿವೆ.ಬಸ್‌ನಲ್ಲಿ 90ಕ್ಕಿಂತ ಹೆಚ್ಚು ಜನ ಸಂಚರಿಸುತ್ತಿದ್ದರು.ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.