ದಾವಣಗೆರೆ: ಗುಡ್ಡದಹಳ್ಳಿಗೆ ನೂತನ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಮಾಯಕೊಂಡ ಕ್ಷೇತ್ರದ ಗುಡ್ಡದಹಟ್ಟಿಗೆ ನೂತನ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ನಂತರ ಮಾತನಾಡಿ ಮಕ್ಕಳ ಭವಿಷ್ಯ ಉಜ್ವಲವಾಗಲು ಅವರಿಗೆ ಸರಿಯಾದ ಶಿಕ್ಷಣ ಲಭಿಸಿ ಉತ್ತಮ ಆರೋಗ್ಯ ಸಂರಕ್ಷಣೆ ಸಿಕ್ಕಾಗ ಅವರ ಸಂಪೂರ್ಣ ಅಭಿವೃದ್ಧಿಯಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರ ಸಂಚರಿಸಿ ಶಾಲೆ, ಗ್ರಾಮದ ಮೂಲಭೂತ ಸೌಕರ್ಯದ ಕಡೆ ಹೆಚ್ಚು ಗಮನಿಸುತ್ತೇನೆ.ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣ ಸಿಗಬೇಕು. ಇದು ಲಭಿಸಿದಾಗ ಅವರ ಶಿಕ್ಷಣಕ್ಕೆ ಸರಿಯಾದ ಅಡಿಪಾಯ ಹಾಕಿದಂತಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಮಕ್ಕಳು ಸೇರಿದಂತೆ ಜನರಿಗೆ ಆರೋಗ್ಯ ಸೌಕರ್ಯಗಳು ಸಿಗಬೇಕೆಂದು ತಿಳಿಸಿದರು.

ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯ ಇನ್ನೂ ಅಗತ್ಯವಾಗಿದೆ, ಸರ್ಕಾರಿ ಶಾಲೆಯಲ್ಲಿ ಓದಿದವರು ಅನೇಕ ಉನ್ನತ ಹುದ್ದೆ, ಸ್ಥಾನದಲ್ಲಿದ್ದಾರೆ. ಈ ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಶಾಲಾಭಿವೃದ್ದಿ ಮಾಡಲು ಎಸ್.ಡಿ.ಎಂ.ಸಿ.ಯವರು ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಮಾಡುವ ಮೂಲಕ ಅವರಿಂದ ಆರ್ಥಿಕ ಸಹಕಾರ, ಸಲಹೆಗಳನ್ನು ಪಡೆದು ತಮ್ಮ ಶಾಲೆಯ ಕೊಠಡಿ, ಶಾಲಾಭಿವೃದ್ದಿ ಮಾಡಬಹುದಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಹೊಂದುವುದರಿಂದ ಇವರು ಉತ್ತಮ ಶಿಕ್ಷಕರಾಗಿರುವರು. ಶಿಕ್ಷಕರ ಸದ್ಬಳಕೆಯಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಮತ್ತು ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ದಿ ಮಾಡುವಲ್ಲಿ ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.

ಕ್ಷೇತ್ರದ ಜನರ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಚೇರಿಯನ್ನು ಆರಂಭಿಸಲಾಗಿದ್ದು ಜನರು ಇಲ್ಲಿಗೆ ಬಂದು ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಕುಂದುಕೊರತೆಗಳ ಅಹವಾಲುಗಳನ್ನು ನೀಡಬಹುದಾಗಿದೆ. ಮುಂದಿನ ದಿನಗಳಲ್ಲಿ ನಾನು ಸಹ ದಾವಣಗೆರೆಯಲ್ಲಿರದೆ ಕ್ಷೇತ್ರದಲ್ಲಿ ಸಂಚರಿಸುವ ಮೂಲಕ ಜನರ ಅಹವಾಲುಗಳನ್ನು ಆಲಿಸಿ ಪರಿಹಾರಿಸಲಾಗುತ್ತದೆ ಎಂದರು.

ಗುಡ್ಡದಹಳ್ಳಿಗೆ ಬಸ್ ಬೇಡಿಕೆ ಸಾಕಷ್ಟು ದಿನಗಳಿಂದ ಇದ್ದು ಇದನ್ನು ಪರಿಹರಿಸಲಾಗಿದೆ. ಮಾಯಕೊಂಡ ರಸ್ತೆ ಅಭಿವೃದ್ದಿಯಾಗಬೇಕೆಂದು ಜನರು ಕೇಳುತ್ತಿದ್ದು ರಸ್ತೆ ನಿರ್ಮಾಣಕ್ಕೆ ರೂ.8 ಕೋಟಿ ಮಂಜೂರಾಗಿದ್ದು ಮುಂದಿನ ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದರು.

ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ ಗುಡ್ಡದಹಳ್ಳಿ ತಾಲ್ಲೂಕಿನ ಕೊನೆಯ ಭಾಗದಲ್ಲಿದ್ದು ಇಲ್ಲಿಗೆ ಬಸ್ ಸಂಪರ್ಕವಿಲ್ಲದೆ ಜನರಿಗೆ ಸಾಕಷ್ಟು ಅನಾನುಕೂಲವಾಗಿತ್ತು. ಬಸ್ ಸೌಕರ್ಯ ಕಲ್ಪಿಸಿದ್ದರಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ಮೂಡಿದೆ. ಭಾವಿಹಾಳ್ ಮೂಲಕ ಗುಡ್ಡದಹಳ್ಳಿ, ನರಗÀನಹಳ್ಳಿ ಮೂಲಕ ದಾವಣಗೆರೆಗೆ ಪ್ರಯಾಣಿಸಬಹುದು. ಈ ಬಸ್ ಗ್ರಾಮಕ್ಕೆ ಬೆಳಗ್ಗೆ 8.45 ಕ್ಕೆ ಬರಲಿದ್ದು ಮಧ್ಯಾಹ್ನ 1.30 ಕ್ಕೆ ದಾವಣಗೆರೆಯಿಂದ ಗ್ರಾಮಕ್ಕೆ ಮತ್ತು ಸಂಜೆ 4 ಗಂಟೆಗೆ ದಾವಣಗೆರೆಯಿಂದ ಬಾವಿಹಾಳ್ ಮಾರ್ಗವಾಗಿ ಗುಡ್ಡದಹಳ್ಳಿ ತಲುಪಲಿದೆ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ತಾಯಂದಿರು ಮೊದಲನೆಯದಾಗಿ ಈ ಸೌಲಭ್ಯ ಪಡೆಯುವಂತಾಗಲಿ ಎಂದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು, ಎಲ್ಲೆಂದರಲ್ಲಿ ಹಾಕಿರುವ ಪ್ಲಾಸ್ಟಿಕ್ ತೆಗೆದು ಸ್ವಚ್ಚತೆ ಕಾಪಾಡಬೇಕು. ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಶಾಸಕರು, ಸಂಸದರು ಕಲ್ಪಿಸಲಿದ್ದು ತಾವುಗಳು ಗ್ರಾಮವನ್ನು ಸಂಪೂರ್ಣವಾಗಿ ಸ್ವಚ್ಚವಾಗಿಟ್ಟುಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಕರಾದ ಸಿದ್ದೇಶ್ ಹೆಬ್ಬಾಳ್, ತಹಶೀಲ್ದಾರ್ ಡಾ; ಅಶ್ವಥ್, ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ ನಾಗರಾಜ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *