ದಾವಣಗೆರೆ: ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ ಪರಿಣಾಮ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆಯಿಂದಲೇ ಬಸ್ ಸಂಚಾರ ಇಲ್ಲದಿದ್ದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪರದಾಡಿದರು. ಜಿಲ್ಲಾಡಳಿತ ಸಹ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪರ್ಯಾಯವಾಗಿ ಖಾಸಗಿ, ಎಲೆಕ್ಟ್ರಿಕ್ ಬಸ್ ವ್ಯವಸ್ಥೆ ಮಾಡಿದೆ.
ನಿನ್ನೆಯೇ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಸಹ ಕಡಿಮೆ ಇತ್ತು. ಮುಷ್ಕರದ ಗೊತ್ತಿಲ್ಲದೆ ಬಂದವರು ಪರದಾಟ ನಡೆಸಿದರು. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ಖಾಸಗಿ, ಎಲೆಕ್ಟ್ರಿಕ್ ಬಸ್ ಗಳ ಮೂಲಕ ಸೇವೆ ಒದಗಿಸಲಾಗುತ್ತಿದೆ.
ಬಸ್ ಸಂಚಾರ ತಡೆಯಲು ಪ್ರಯತ್ನಿಸಿದ ಕೆಎಸ್‌ಆರ್‌ಟಿಸಿ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ನಿಲ್ದಾಣದಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.ಒತ್ತಾಯ ಪೂರ್ವಕವಾಗಿ ಬಸ್ ಸಂಚಾರ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.