ದಾವಣಗೆರೆ: 6ನೇ ವೇತನ ಆಯೋಗ ಅನ್ವಯ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟ ರಾಜ್ಯದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, 9 ನೇ ದಿನಕ್ಕೆ ಕಾಲಿಟ್ಟಿದೆ. ದಾವಣಗೆರೆಯಲ್ಲಿಯಲ್ಲಿ ಕೂಡ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಮುಷ್ಕರದ ಮಧ್ಯೆಯೂ ಇಂದು 50 ಕೆಎಸ್ ಆರ್ ಟಿಸಿ ಬಸ್ ಗಳು ಕಾರ್ಯಾಚರಣೆ ನಡೆಸಿವೆ ಎಂದು ಡಿವಿಜಿ ಸುದ್ದಿಗೆ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ ಎನ್. ಹೆಬ್ಬಾಳ್ ತಿಳಿಸಿದ್ದಾರೆ.
ದಾವಣಗೆರೆ ಕೆಎಸ್ ಆರ್ ಟಿಸಿ ವಿಭಾಗದಲ್ಲಿ ದಾವಣಗೆರೆ 1, ದಾವಣಗೆರೆ 2 ಹಾಗೂ ಹರಿಹರ ಘಟದಲ್ಲಿ ಒಟ್ಟು 1,135 ಸಾರಿಗೆ ಸಿಬ್ಬಂದಿ ಇದ್ದು, ಇದರಲ್ಲಿ ಇಂದು ಟ್ರೈನಿ ಸೇರಿ 65 ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದಾರೆ. 350 ಬಸ್ ಗಳಲ್ಲಿ ಇಂದು 50 ಬಸ್ ಗಳು ಕಾರ್ಯಾಚರಣೆ ನಡೆಸಿವೆ. ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ದಾವಣಗೆರೆ ವಿಭಾದಿಂದ ಒಟ್ಟು 9 ದಿನದಲ್ಲಿ 3 ಕೋಟಿಯಷ್ಟು ನಷ್ಟ ಸಂಭವಿಸಿದೆ.



