ದಾವಣಗೆರೆ: ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೃಷಿ ಪದವಿಗಳ (agriculture degree) ಪರಿಚಯ ಮತ್ತು ಅವಕಾಶಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಏ.22ರಂದು ಬೆಳಗ್ಗೆ 9 ಗಂಟೆಗೆ ದಾವಣಗೆರೆಯ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ(ICAR-TKVK Davangere) ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥ ಡಾ. ಟಿ.ಎನ್. ದೇವರಾಜ ತಿಳಿಸಿದ್ದಾರೆ.
ಕೃಷಿ ಪದವಿಗಳಿಗೆ ಪ್ರವೇಶ ಬಯಸುವ ಕೃಷಿಕರ ಮಕ್ಕಳಿಗೆ ಶೇಕಡಾ 50ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ನೀಡಿದ್ದು ಇದರ ಸದುಪಯೋಗವನ್ನು ಪಡೆಯಬೇಕೆಂದು ತಿಳಿಸಿದ್ದಾರೆ. ಪ್ರಸ್ತುತ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯದ ಕೃಷಿ ಸಂಬಂಧಿಸಿದ ವಿಶ್ವ ವಿದ್ಯಾನಿಲಯಗಳ ಪರಿಚಯ, ಕೃಷಿ ಮತ್ತು ಸಂಬಂಧಿಸಿದ ಪದವಿಗಳ ಬಗ್ಗೆ, ಪ್ರಾಯೋಗಿಕ ಪರೀಕ್ಷೆಗೆ ತಯಾರು ಮಾಡುವ ಕುರಿತು, ಸಿಇಟಿ ಮುಂದಿನ ಕ್ರಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ಕೇಂದ್ರದ ತೋಟಗಾರಿಕೆ ತಜ್ಞ ಡಾ. ಬಸವನಗೌಡ ಎಂ.ಜಿ. ನೀಡುವರು.
ಈಗಾಗಲೇ ನಮ್ಮಲ್ಲಿ ತರಬೇತಿ ಪಡೆದಿರುವ 309 ವಿದ್ಯಾರ್ಥಿಗಳು ರಾಜ್ಯದ ವಿವಿಧ ಕೃಷಿ, ತೋಟಗಾರಿಕೆ ಮತ್ತು ಪಶು ವಿಜ್ಞಾನ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ತರಬೇತಿ ಒಂದು ದಿನದ್ದಾಗಿದ್ದು, ಪ್ರವೇಶ ಶುಲ್ಕ ರೂ. 500 ಪಾವತಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.
ತರಬೇತಿಯ ಸಂದರ್ಭದಲ್ಲಿ ವಿದ್ಯಾರ್ಥಿಯ ಜೊತೆಗೆ ಒಬ್ಬರು ಪೋಷಕರು ಬಂದರೆ ಸಿಇಟಿಯ ಕ್ರಮಗಳನ್ನು ತಿಳಿದುಕೊಳ್ಳುವುದು ಉತ್ತಮ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9535354888 ( ಪ್ರಭುಪ್ರಸಾದ ಎನ್.ಕೆ.) ಅಥವಾ 08192 -263462 ,297142 ಗೆ ಕರೆ ಮಾಡಿ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.