Connect with us

Dvg Suddi-Kannada News

ಇನ್ಮುಂದೆ ಕೆರೆ ಸಂರಕ್ಷಣೆ, ನಿರ್ವಹಣೆ ಕುರಿತು ದೂರು ನೀಡಲು ಈ ನಂಬರ್ ಗೆ ಸಂಪರ್ಕಿಸಿ

ದಾವಣಗೆರೆ

ಇನ್ಮುಂದೆ ಕೆರೆ ಸಂರಕ್ಷಣೆ, ನಿರ್ವಹಣೆ ಕುರಿತು ದೂರು ನೀಡಲು ಈ ನಂಬರ್ ಗೆ ಸಂಪರ್ಕಿಸಿ

ದಾವಣಗೆರೆ: ಕೆರೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕಳೆದ ಜನವರಿ 16 ರಂದು ಉಚ್ಛ ನ್ಯಾಯಾಲಯ ನೀಡಿರುವ ಆದೇಶದನ್ವಯ ಕೆರೆಗಳ ಪ್ರದೇಶದಲ್ಲಿ ಅನಧಿಕೃತ ಒತ್ತುವರಿ, ಕೆರೆ ಮಾಲಿನ್ಯ, ಕೆರೆ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತಂತೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ದೂರು ನಿರ್ವಹಣಾ ಕೇಂದ್ರವನ್ನು ಸ್ಥಾಪಿಸಿದ್ದು 08192-226301 ಕ್ಕೆ ಸಂಪರ್ಕಿಸಬಹುದಾಗಿದೆ.

ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳ ಪ್ರದೇಶಗಳಲ್ಲಿ ಅನಧಿಕೃತ ಒತ್ತ್ತುವರಿ, ಕೆರೆಮಾಲಿನ್ಯ, ಕೆರೆ ಸಂರಕ್ಷಣೆ ಮತ್ತು ಇನ್ನಿತರೆ ಕೆರೆ ಸಂರಕ್ಷಣೆಗೆ ಸಂಬಂಧಿಸಿದಂತೆ ದೂರುಗಳು ಏನಾದರೂ ಇದ್ದಲ್ಲಿ ಸಾವರ್ಜನಿಕರು ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ, ದಾವಣಗೆರೆ ಇಲ್ಲಿ ಸ್ಥಾಪಿಸಿರುವ ಕೆರೆ ಸಂರಕ್ಷಣೆ ಮತ್ತು ನಿರ್ವಹಣೆಯ ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ 08192-226301 ಕ್ಕೆ ಸಂಪರ್ಕಿಸಬಹುದು.

ನದಿ ಮಾಲಿನ್ಯ ನಿಯಂತ್ರಣ ಮತ್ತು ಸಂರಕ್ಷಣೆಗೆ ಸಂಬಂಧಿಸಿದಂತೆ ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ದೂರವಾಣಿ ಸಂಖ್ಯೆ 08192-252895 ಗೆ ಕಚೇರಿ ಸಮಯದಲ್ಲಿ ಕರೆ ಮಾಡಿ ದೂರುಗಳನ್ನು ನೀಡಬಹುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top