Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ಲೋಕ್ ಅದಾಲತ್; ರಾಜಿ ಮೂಲಕ ಸಿವಿಲ್, ಕ್ರಿಮಿನಲ್ ಇತ್ಯರ್ಥಕ್ಕೆ‌ ಅವಕಾಶ

ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಲೋಕ್ ಅದಾಲತ್; ರಾಜಿ ಮೂಲಕ ಸಿವಿಲ್, ಕ್ರಿಮಿನಲ್ ಇತ್ಯರ್ಥಕ್ಕೆ‌ ಅವಕಾಶ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ದೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನ.12 ರಂದು ರಾಷ್ಟ್ರೀಯ ಲೋಕದಾಲತ್ ಆಯೋಜಿಸಲಾಗಿದೆ.

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಆದ್ದರಿಂದ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲೆಗಳಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ ಆಯೋಜಿಸಲಾಗಿದೆ. ಈ ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್ ಕಾಯ್ದೆಯಡಿ ಪ್ರಕರಣಗಳು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು.

ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು(ವಿಚ್ಚೇದನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕಾ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‍ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲದ ಸಂಕೀಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದಾವಣಗೆರೆ ದೂ.ಸಂ:08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ ದೂ.ಸಂ:08192-296885, ಹೊನ್ನಾಳಿ ದೂ.ಸಂ:08188-251732, ಚನ್ನಗಿರಿ ದೂ.ಸಂ:08189-229195, ಜಗಳೂರು ದೂ.ಸಂ:08196-227600ನ್ನು ಸಂಪರ್ಕಿಸಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ ನಾಯಕ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top