Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾನೂನು ಪದವೀಧರರಿಗೆ 4 ವರ್ಷದ ತರಬೇತಿಗೆ ಅರ್ಜಿ ಆಹ್ವಾನ; ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 5 ಸಾವಿರ ಭತ್ಯೆ

ದಾವಣಗೆರೆ

ದಾವಣಗೆರೆ: ಕಾನೂನು ಪದವೀಧರರಿಗೆ 4 ವರ್ಷದ ತರಬೇತಿಗೆ ಅರ್ಜಿ ಆಹ್ವಾನ; ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 5 ಸಾವಿರ ಭತ್ಯೆ

ದಾವಣಗೆರೆ; ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷದ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮತೀಯ ಅಲ್ಪಸಂಖ್ಯಾತರ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್, ಆಂಗ್ಲೋಇಂಡಿಯನ್ ಗೆ ಸೇರಿದವರು ಅರ್ಜಿ ಸಲ್ಲಿಸಬಹುದು. ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ತರಬೇತಿಯ ಅವಧಿ 4 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.5000 ತರಬೇತಿ ಭತ್ಯೆ ನೀಡಲಾಗುವುದು. ಜಿಲ್ಲೆಯಿಂದ 05 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 08192-250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top