Connect with us

Dvgsuddi Kannada | online news portal | Kannada news online

ದಾವಣಗೆರೆ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಭ್ರಮಾಚರಣೆ  

ದಾವಣಗೆರೆ

ದಾವಣಗೆರೆ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಭ್ರಮಾಚರಣೆ  

ದಾವಣಗೆರೆ: ವೀರಶೈವ ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ನಿರ್ಧಾರವನ್ನು ವೀರಶೈವ ಮಹಾಸಭಾ ಜಿಲ್ಲಾ ಘಟಕ ಹಾಗೂ ರಾಜ್ಯ ಯುವ ಘಟಕದಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ನಗರದ ಕಾಯಿಪೇಟೆಯ  ಬಸವೇಶ್ವರ ದೇವಸ್ಥಾನದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ  ಸಂಭ್ರಮಾಚರಣೆ ಮಾಡಲಾಯಿತು. ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ  ಡಾ.ಶಾಮನೂರು ಶಿವಶಂಕರಪ್ಪ ಅವರ  ಮನವಿಗೆ ಸ್ಪಂದಿಸಿ  ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ ಅವರು ನಿಗಮ ರಚಿಸಿದ್ದಾರೆ. ವೀರಶೈವ ಮಹಾಸಭಾ ದಾವಣಗೆರೆ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಹಾಗೂ ರಾಜ್ಯ  ಯುವ ಘಟಕದ ಉಪಾಧ್ಯಕ್ಷ ಶ್ರೀನಿವಾಸ್ ಶಿವಗಂಗಾ ಮುಖ್ಯಮಂತ್ರಿಗಳಿಗೆ  ಧನ್ಯವಾದ ತಿಳಿಸಿದರು.

0fdb7302 bf42 453c 9329 06df759a38ea

ಈ ಸಂಧರ್ಭದಲ್ಲಿ ಮಾತನಾಡಿದ ದೇವರಮನೆ ಶಿವಕುಮಾರ್ , ಮುಖ್ಯಮಂತ್ರಿಗಳಿಗೆ ಅಭಿನಂದಿಸಿ ಈ ಕೂಡಲೇ ನಿಗಮಕ್ಕೆ 1000 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಗೊಳಿಸಬೇಕು, ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಎಲ್ಲಾ ಒಳ ಪಂಗಡಗಳಿಗೂ ಶೇ 16% ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು.

ನಗರ ಯುವ ಘಟಕ ಅಧ್ಯಕ್ಷರಾದ ಶಂಭು ಊರೇಕೊಂಡಿ ನೇತೃತ್ವದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರುಗಳಾದ  ಸೋಗಿ ಶಾಂತಕುಮಾರ್, ಶಿವನಗೌಡ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಆರ್ ಟಿ ಪ್ರಶಾಂತ್, ನಗರ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನೀಲಗುಂದ, ಅವಿನಾಶ್ ಬಂಡೋಲ್, ಉಪಾಧ್ಯಕ್ಷರುಗಳಾದ ರಾಜು ನೀಲಗುಂದ್, ಗುರು ಸೋಗಿ, ಅಭಿಷೇಕ್ ಎಳೆಹೊಳೆ, ಕಾರ್ಯದರ್ಶಿಗಳಾದ ಅಖಿಲೇಶ್ ಕೊಗುಂಡಿ, ಟಿಂಕರ್ ಮಂಜಣ್ಣ,ರಾಜು ನೀಲಗುಂದ   ಅವಿನಾಶ್ ಬಂದೋಳ್ ನಾಗರಾಜ್ ಬೇಳವನೂರು, ಗಂಗಾಧರ, ಜಯದೇವ,ಮಹಿಳಾ ಘಟಕದ ನಗರ ಅಧ್ಯಕ್ಷೆ ವಾಲಿ, ಶೋಭಾ ಕೊಟ್ರೇಶ್, ಮಂಗಳ, ಮಂಜುಳಾ ಇಟಗಿ, ಗುರು ಸೋಗಿ, ಯೊಗೇಶ್ ದೇವರಮನಿ ಉಪಸ್ಥಿತರಿದ್ದರು.

b4eb0d91 0aee 4449 a9c6 a127995d05f4

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top