ದಾವಣಗೆರೆ: ಈ ಮೂರು ದಿನ ಮದ್ಯ ಮಾರಾಟ ನಿಷೇ
ದಾವಣಗೆರೆ: ಜಿಲ್ಲೆಯಾದ್ಯಂತ ಆಗಸ್ಟ್ 27 ರಂದು ಗಣೇಶ ಚತುರ್ಥಿ ಮತ್ತು ಸೆಪ್ಟೆಂಬರ್ 5 ರಂದು ಈದ್ ಮಿಲಾದ್ ಆಚರಿಸಲಿರುವ ಹಬ್ಬದ ಪ್ರಯುಕ್ತ ಆಗಸ್ಟ್ 31, ಸೆಪ್ಟೆಂಬರ್ 4 ಮತ್ತು 5 ರಂದು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿ ಹಾಗೂ ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಒಟ್ಟಾರೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇದಿಸಿ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.



