ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದ, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ (PMFME)ಯೋಜನೆಯಡಿಯಲ್ಲಿ, ಕಿರು ಆಹಾರ ಸಂಸ್ಕರಣ ಉದ್ದಿಮೆ ಸ್ಥಾಪಿಸಲು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ರೂ.40,000/-ಗಳ ಅನುದಾನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ: ಗ್ರಾಮೀಣ ಪ್ರದೇಶದ ಅರ್ಜಿದಾರರು ಗ್ರಾಮ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಯ ದೂರವಾಣಿ ಸಂಖ್ಯೆ:9535848675 ಹಾಗೂ ನಗರ ಪ್ರದೇಶದ ಅರ್ಜಿದಾರರು ನಗರ ಸ್ಥಳೀಯ ಸಂಸ್ಥೆಗಳು /ಮುನಿಸಿಪಾಲಿಟಿಗಳ ಮುಖ್ಯಸ್ಥರ ದೂರವಾಣಿ ಸಂಖ್ಯೆ:9448759715 ಯನ್ನು ಸಂಪರ್ಕಿಸುವುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



