ದಾವಣಗೆರೆ: ದೇವರಾಜ್ ಅರಸ್, ಹಿಂದುಳಿದ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಅಭ್ಯರ್ಥಿಗಳಿಗೆ ಸಾಲ-ಸೌಲಭ್ಯ ಒದಗಿಸಲು ಆನ್‍ಲೈನ್ ಮೂಲಕ ಅರ್ಜಿಗಳ ಆಹ್ವಾನ ಮಾಡಲಾಗಿದೆ.ಅರ್ಜಿ ಸಲ್ಲಿಸಲು ಅ.30 ಕೊನೆಯದಿನವಾಗಿದೆ.
ವಿಕಲಚೇತನರಿಗೆ ಮೀಸಲಿರಿಸಿದ ಅನುದಾನದಡಿಯಲ್ಲಿ ವಿಕಲಚೇತನ ಫಲಾನುಭವಿ ಆಧಾರಿತ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಶ್ರೀ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ-577002 ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.



