ಡಿವಿಜಿ ಸುದ್ದಿ, ದಾವಣಗೆರೆ : 2012-13ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಯಡಿ ಬಾಕಿ ಉಳಿದಿರುವ ಪರಿಶಿಷ್ಟ ಜಾತಿ-11, ಪರಿಶಿಷ್ಟ ಪಂಗಡ-07 ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗದ 13 ಒಟ್ಟು 31 ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ರೂ.2 ಲಕ್ಷಗಳನ್ನು ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅ.06 ರಂದು ಮೂಲ ದಾಖಲಾತಿಗಳ ಪರಿಶೀಲನೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಅ.06 ರಂದು ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹಾಗೂ ಪ.ಜಾತಿ, ಪ.ಪಂ ಅಭ್ಯರ್ಥಿಗಳಿಗೆ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಅರ್ಜಿ ಪರಿಶೀಲನಾ ಸಮಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅವರ ಮೂಲ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ ಪ್ರವಾಸೋದ್ಯಮ ಇಲಾಖೆ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ರೈಲ್ವೆ ನಿಲ್ದಾಣದ ಪಕ್ಕ, ಪಿಬಿ ರಸ್ತೆ ದಾವಣಗೆರೆ ಇಲ್ಲಿ ಪರಿಶೀಲಿಸಲಾಗುವುದು.
ಈ ಸಂಬಂಧ ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಸೂಚನಾಪತ್ರವನ್ನು ಕಳುಹಿಸಲಾಗಿದೆ. ಪತ್ರ ತಲುಪದೇ ಇರುವವರು ಮೇಲ್ಕಂಡ ದಿನಾಂಕದಂದು ಅರ್ಜಿಯೊಂದಿಗೆ ಸಲ್ಲಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ಸೂಚಿಸಲಾಗಿದೆ. ನಿಗದಿತ ದಾಖಲೆಗಳನ್ನು ಸಲ್ಲಿಸದೇ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಸೂಚನಾ ಫಲಕದಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230123ನ್ನು ಸಂಪರ್ಕಿಸಬಹುದೆಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



