Connect with us

Dvg Suddi-Kannada News

ದಾವಣಗೆರೆ: ನಾಳೆ ಲಾಕ್ ಡೌನ್ ಸಡಿಲಿಕೆ; ಬೆಳಗ್ಗೆ 6 ರಿಂದ 12 ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ದಾವಣಗೆರೆ

ದಾವಣಗೆರೆ: ನಾಳೆ ಲಾಕ್ ಡೌನ್ ಸಡಿಲಿಕೆ; ಬೆಳಗ್ಗೆ 6 ರಿಂದ 12 ವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ದಾವಣಗೆರೆ: ಜಿಲ್ಲೆಯಲ್ಲಿ ಜೂನ್ 14 ರವರೆಗೆ ಕೊನೆಗೊಳ್ಳಬೇಕಿದ್ದ  ಲಾಕ್‍ಡೌನ್,  ಜೂನ್ 21ರವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಾಳೆ (ಜೂ.14) ಅಗತ್ಯ ವಸ್ತು ಖರೀದಿಗೆ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಬೆಳಗ್ಗೆ 6ರಿಂದ 12 ಗಂಟೆ ವರೆಗೆ ಅವಕಾಶ ನೀಡಲಾಗಿದೆ.

ಈ ಹಿಂದಿನ ಮಾರ್ಗಸೂಚಿಯಂತೆ ಲಾಕ್‍ಡೌನ್‍ನ ಎಲ್ಲಾ ನಿರ್ಬಂಧಗಳು ಜೂನ್ 21ರವರೆಗೆ ಮುಂದುವರೆದಿದ್ದು, ಜೂನ್ 14, 16, 18 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು ಹಾಗೂ ಮದ್ಯದ ಅಂಗಡಿಗಳು ತೆರದಿರಲಿವೆ.

ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿರುವ ಹಿನ್ನೆಲೆಯಲ್ಲಿ ಕಟ್ಟಡ ಕೆಲಸ, ಕಾಮಗಾರಿಗಳು, ಕಟ್ಟಡ ಕಾಮಗಾರಿ ಸಾಮಾಗ್ರಿ ಮತ್ತು ಅಗತ್ಯ ವಸ್ತುಗಳಾದ ಸಿಮೆಂಟ್, ಕಬ್ಬಿಣ, ಪೇಂಟ್ಸ್, ಹಾರ್ಡ್‍ವೇರ್, ಗ್ಲಾಸ್, ಪ್ಲೆ-ವುಡ್, ಸಾಮಿಲ್ಸ್, ಎಲೆಕ್ಟ್ರೀಕಲ್ಸ್, ಟೈಲ್ಸ್ ಅಥವಾ ಮಾರ್ಬಲ್ಸ್, ಸ್ಯಾನಿಟರಿ ವೈರ್ಸ್ ಅಂಗಡಿಗಳ ಚಟುವಟಿಕೆಗಳನ್ನು ನಡೆಸಲು ಜೂನ್ 14, 16, 18 ರ ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ಮೂರು ದಿನ ಅವಕಾಶ ಕಲ್ಪಿಸಲಾಗಿದೆ ಎಂದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top