ದಾವಣಗೆರೆ: ಲೋಕ ಅದಾಲತ್‍ ನಲ್ಲಿ ಮರಳಿ ಒಂದಾದ ಜೋಡಿಗಳು: ನ್ಯಾ. ರಾಜೇಶ್ವರಿ.ಎನ್.ಹೆಗಡೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜಿ ಸಂಧಾನದಡಿ ಜಿಲ್ಲೆಯಲ್ಲ್ಲಿ 4,000 ಪ್ರಕರಣಗಳನ್ನು ನ್ಯಾಯಲಯದ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

ಶನಿವಾರ(ಮಾ.16) ರಂದು ನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ದಾಂಪತ್ಯ ಜೀವನದಲ್ಲಿ ಬಿರುಕು ಕಂಡು ವಿಚ್ಚೇದನ ಪಡೆಯುವ ಹಂತಕ್ಕೆ ತಲುಪಿ ನ್ಯಾಯಾಲಯದ ಮೆಟ್ಟಿಲು ಏರಿದ್ದ ದಂಪತಿಗಳಲ್ಲಿ 7 ಜನ ದಂಪತಿಗಳು ಕಳೆದ 4 ವರ್ಷದಿಂದ ನ್ಯಾಯಾಲಯಕ್ಕೆ ವಿಚ್ಚೇದನಕ್ಕಾಗಿ ಅಲೆದಾಡುತ್ತಿದ್ದರು. ಇವರಲ್ಲಿ ಪರಶುರಾಮ ಕೋಂ ಇಂದಿರಾ, ಇವರು ಮಾರ್ಚ್ 16 ರಂದು ನಡೆದ ಲೋಕಅದಾಲತ್‍ನಲ್ಲಿ ಒಂದಾಗಿದ್ದಾರೆ. ವೀರೇಶ್ ಕೋಂ ಪೂಜಾ, ಇವರು 2 ವರ್ಷದಿಂದ ನ್ಯಾಯಲಯದಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದು, ಈಗ ಲೋಕಅದಾಲತ್‍ನಲ್ಲಿ ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಪ್ರೀತಂ ಕೋಂ ಚಂದನ್, ಮಂಜುನಾಥ ಕೋಂ ಕಲ್ಪನ, ಸಂದೀಪ ಕೋಂ ವಿಶಾಲ ಲೋಕದಾಲತ್‍ನಲ್ಲಿ ಒಂದಾಗಿದ್ದಾರೆ.

ಲೋಕಅದಾಲತ್‍ನಲ್ಲಿ ಇನ್ನೂ 1000 ಪ್ರಕರಣಗಳು ರಾಜಿಯಾಗಬಹುದು. ಲೋಕ ಅದಾಲತ್ ಪರ್ಯಾಯ ವಿವಾದ ಪರಿಹಾರ ಕಾರ್ಯವಿಧಾನಗಳಲ್ಲಿ ಒಂದು. ವ್ಯಾಜ್ಯ ಪೂರ್ವ ಹಂತದಲ್ಲಿ ಬಾಕಿ ಇರುವ ವಿವಾದಗಳು, ಪ್ರಕರಣಗಳನ್ನು ಇತ್ಯರ್ಥಪಡಿಸುವ ವೇದಿಕೆಯಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ, ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ದಶರಥ.ಬಿ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರವೀಣಕುಮಾರ್, ಪೋಕ್ಸೋ ನ್ಯಾಯಾಧೀಶರಾದ ಶ್ರೀಪಾದ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್. ಹೆಚ್. ಅರುಣಕುಮಾರ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *