Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್; ರಾಜಿ, ಸಂಧಾನದ ಮೂಲಕ ಕೇಸ್ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ದಾವಣಗೆರೆ

ದಾವಣಗೆರೆ: ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್; ರಾಜಿ, ಸಂಧಾನದ ಮೂಲಕ ಕೇಸ್ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ದಾವಣಗೆರೆ: ಡಿ.14 ರಂದು ತಾಲ್ಲೂಕು, ಜಿಲ್ಲಾ, ರಾಜ್ಯ ಸೇರಿದಂತೆ ರಾಷ್ಟ್ರಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ‌ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು.

  • ಡಿ.14 ರಂದು ರಾಷ್ಟ್ರೀಯ ಲೋಕ ಅದಾಲತ್
  • ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಧನದಂತೆ ಅದಾಲತ್
  • ರಾಜಿ, ಸಂಧಾನದ ಮೂಲಕ ಕೇಸ್ ಇತ್ಯರ್ಥಪಡಿಸಿಕೊಳ್ಳಲು ಅವಕಾಶ
  • ರಾಜಿ ಮೂಲಕ ಕಕ್ಷಿದಾರ ಹಾಗೂ ನ್ಯಾಯಾಲಯದ ಸಮಯ ಹಾಗೂ ಹಣ ಉಳಿತಾಯ
  • ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿಯೂ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಷ್ಟ್ರದಾದ್ಯಂತ ಡಿ.14 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಡಿ.2 ರಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿದರು.

ಲೋಕ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಸಂಬಂಧವಾಗಿ ಪರಿಹಾರ ಕೋರಿದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರಿಗೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಶುಲ್ಕದ ಪ್ರಕರಣಗಳು, ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಬ್ಯಾಂಕ್ ಹಣ ವಸೂಲಾತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಂಡು ಶೀಘ್ರ ಪರಿಹಾರ ಪಡೆಯಲು ಇದು ಒಂದು ಉತ್ತಮ ಅವಕಾಶವಾಗಿದೆ. ಜಿಲ್ಲೆಯ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ರಾಜಿ ಆಗುವುದರಿಂದ ಕಕ್ಷಿದಾರ ಹಾಗೂ ನ್ಯಾಯಾಲಯದ ಸಮಯ ಹಾಗೂ ಹಣ ಉಳಿತಾಯ ಆಗುತ್ತದೆ. ಕಕ್ಷಿದಾರ ನ್ಯಾಯಾಲಯದಲ್ಲಿ ದಾವೆ ಹೂಡುವಾಗ ಪಾವತಿಸಿದ ಪೂರ್ಣ ಶುಲ್ಕವನ್ನು ರಾಜೀ ಆದ ನಂತರ ಮರು ಪಾವತಿಸಲಾಗುವುದು. ಹಾಗೂ ಇಬ್ಬರೂ ಪಕ್ಷಗಾರರ ಮಧ್ಯ ಇದ್ದ ದ್ವೇಷ ದೂರವಾಗಿ ಅನ್ಯೋನ್ಯವಾಗಿರುತ್ತಾರೆ.

ಡಿ.14 ರಂದು ಎರಡನೇ ಶನಿವಾರವಾಗಿದ್ದು, ಬೇರೆ ಯಾವುದೇ ಕಲಾಪಗಳು ನಡೆಯದೇ ಸಂಪೂರ್ಣವಾಗಿ ಲೋಕ ಅದಾಲತ್ ಪ್ರಕರಣಗಳ ರಾಜೀ ಸಂಧಾನ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ನ್ಯಾಯಾಧೀಶರು ಕಲಾಪ ನಡೆಸುವರು. ಇದೇ ರೀತಿ ತಾಲ್ಲೂಕು ಮಟ್ಟದಲ್ಲೂ ಅದಾಲತ್ ನಡೆಯಲಿದೆ. ನ್ಯಾಯಾಧೀಶರೊಂದಿಗೆ ವಕೀಲರು ಮತ್ತು ಕಕ್ಷಿದಾರರೂ ಕಲಾಪದಲ್ಲಿ ಪಾಲ್ಗೊಳ್ಳುವರು.

ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು 40,550 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು ಈ ಪ್ರಕರಣಗಳಲ್ಲಿ ಒಟ್ಟು 17 ರಿಂದ 18 ಸಾವಿರ ರಾಜಿ ಆಗಬಲ್ಲ ಪ್ರಕರಣಗಳನ್ನು ಗುರುತಿಸಿ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ.ಸೆಪ್ಟೆಂಬರ್ ಮಾಹೆಯಲ್ಲಿ ಒಟ್ಟು 7042 ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಶೀಘ್ರ ಇತ್ಯರ್ಥಪಡಿಸಲಾಗಿತ್ತು. ಈ ಬಾರಿ ಕಳೆದ ಬಾರಿಗಿಂತ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ.

ಲೋಕ ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಕಡಿಮೆ ಇದ್ದು, ಹೆಚ್ಚಿನ ಪ್ರಚಾರ ಮತ್ತು ಮಾಹಿತಿ ನೀಡುವ ಮೂಲಕ ಜನರಲ್ಲಿ ಅರಿವು ಹೆಚ್ಚಿಸಬೇಕು. ಸಣ್ಣ ಪುಟ್ಟ ಪ್ರಕರಣಗಳ ಕುರಿತು ರಾಜೀ ಸಂಧಾನದ ಮೂಲಕ ವ್ಯಾಜ್ಯ ಪರಿಹರಿಸಿಕೊಳ್ಳಬಹುದು. ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆ ಇಲ್ಲ ಎಂಬುದನ್ನು ಪರಿಣಾಮಕಾರಿಯಾಗಿ ಜನ ಸಾಮಾನ್ಯರಲ್ಲಿ ಅರಿವು ಮೂಡಿಸಿದರೆ ನ್ಯಾಯಾಲಯಕ್ಕೆ ಬರುವ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ.ಕರೆಣ್ಞನವರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್, ವಕೀಲರಾದ ನಿವೇದಿತಾ, ಬಸವರಾಜು ಗೋಪಾನಾಳು, ಮಂಜುನಾಥ್, ಪಾಲ್ಗೊಂಡಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top