Connect with us

Dvgsuddi Kannada | online news portal | Kannada news online

ದಾವಣಗೆರೆ: ಏ.22ರಿಂದ‌ ನಾಲ್ಕು ದಿನ ಉಪಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

davangere lokayukta visit

ದಾವಣಗೆರೆ

ದಾವಣಗೆರೆ: ಏ.22ರಿಂದ‌ ನಾಲ್ಕು ದಿನ ಉಪಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ದಾವಣಗೆರೆ: ನ್ಯಾಯಮೂರ್ತಿ ಹಾಗೂ ರಾಜ್ಯದ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ದಾವಣಗೆರೆ: ಅಡಿಕೆ‌ ದರದಲ್ಲಿ ಭರ್ಜರಿ ಏರಿಕೆ; ಮಾ.28ರ ದರ ಎಷ್ಟಿದೆ..?

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಉಪಲೋಕಾಯುಕ್ತರು ಏಪ್ರಿಲ್ 22 ರಂದು ರಾತ್ರಿ 8.30 ಕ್ಕೆ ದಾವಣಗೆರೆಗೆ ಆಗಮಿಸಿ ಸಕ್ರ್ಯೂಟ್‍ಹೌಸ್‍ನಲ್ಲಿ ವಾಸ್ತವ್ಯ ಹೂಡುವರು. ಏ.23 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ. 9.45 ರಿಂದ 10.45 ರವರೆಗೆ ದಾವಣಗೆರೆ ನ್ಯಾಯಾಂಗ ಸಂಕೀರ್ಣದಲ್ಲಿನ ಬಾರ್ ಅಸೋಸಿಯೇಷನ್‍ನಲ್ಲಿ ವಕೀಲರೊಂದಿಗೆ ಸಂವಾದ ನಡೆಸುವರು.

ದಾವಣಗೆರೆ; ನ್ಯಾಮತಿ SBI ಬ್ಯಾಂಕ್ ನ 22 ಕೆಜಿ ಚಿನ್ನ ದರೋಡೆ ಪ್ರಕರಣ; ಐವರು ಆರೋಪಿಗಳ ಬಂಧನ

ಬೆ.11 ರಿಂದ 1.30 ರವರೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಮತ್ತು ಮ.2.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ವಾಸ್ತವ್ಯ ಹೂಡುವರು. ಏ.24 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.30 ರವರೆಗೆ ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸುವರು.

ಇದೇ ಸ್ಥಳದಲ್ಲಿ ಮಧ್ಯಾಹ್ನ2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು, ದೂರು, ಪ್ರಕರಣಗಳನ್ನು ಸ್ವೀಕರಿಸುವರು.ಸಂಜೆ 5.30 ರಿಂದ 6.30 ರವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಕಂದಾಯ, ಪಂಚಾಯತ್ ರಾಜ್, ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ, ಸಾರಿಗೆ, ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಲೋಕಾಯುಕ್ತ ಕಾಯಿದೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡುವರು.

ಏಪ್ರಿಲ್ 25 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.45 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಸುವರು. ಸಂಜೆ 6 ರಿಂದ 7 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನ್ಯಾಯಾಂಗ ಅಧಿಕಾರಿಗಳು ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ವಾಸ್ತವ್ಯ ಹೂಡುವರು.
ಏ.26 ರಂದುಬೆಳಗ್ಗೆ 7 ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.

ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದಾದ ಪ್ರಕರಣ; ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಬಗ್ಗೆ ಹಾಗೂ ಸೌಲಭ್ಯ, ಸೇವೆ ಒದಗಿಸುವಲ್ಲಿ ವಿಳಂಬ, ತಾರತಮ್ಯ, ನಿಯಮ ಪಾಲನೆ ಮಾಡದಿದ್ದಲ್ಲಿ ಏ.24 ರಂದು ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸಲು ವಿವಿಧ ಕೌಂಟರ್‍ಗಳನ್ನು ಇದಕ್ಕಾಗಿ ತೆರೆಯಲಾಗಿರುತ್ತದೆ. ಯಾವುದೇ ಭಯವಿಲ್ಲದೇ ತಮ್ಮ ದೂರುಗಳನ್ನು ಉಪಲೋಕಾಯುಕ್ತರಿಗೆ ಸಲ್ಲಿಸಬಹುದಾಗಿದೆ.

ದೂರು ಸಲ್ಲಿಸಲು ಪ್ರತ್ಯೇಕ ಕೌಂಟರ್‍ ಗಳನ್ನು ತೆರೆಯಲಾಗಿರುತ್ತದೆ, ದೂರು ನೀಡಲು ಆಗಮಿಸುವ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು ಮತ್ತು ಮಧ್ಯಾಹ್ನ ಉಪಹಾರವನ್ನು ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲೆಯ ಅಭಿವೃದ್ದಿಯ ಹಿನ್ನಲೆ ಹಾಗೂ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತು ಹಲವು ಸುಧಾರಣೆಗಳನ್ನು ಜಾರಿ ಮಾಡಲು ಎಲ್ಲಾ ಅಧಿಕಾರಿಗಳು ಸೇರಿ ತಂಡವಾಗಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಸಂಚಾರಿ ನಿಯಮ ಜಾರಿ, ಹೆಲ್ಮೆಟ್ ಕಡ್ಡಾಯ, ಕಾನೂನು ಸುವ್ಯವ್ಯಸ್ಥೆ, ಕಂದಾಯ ಇಲಾಖೆಯಲ್ಲಿ ಪ್ರಕರಣಗಳ ಶೀಘ್ರ ಇತ್ಯರ್ಥ ಸೇರಿದಂತೆ ಹಲವಾರು ಆಡಳಿತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಆಯಾಮಗಳಲ್ಲಿ ರಾಜ್ಯದ ರ್ಯಾಂಕಿಂಗ್‍ನಲ್ಲಿ 5 ರೊಳಗೆ ಇರುತ್ತದೆ ಎಂದರು.

ಜನರ ಇನ್ನಷ್ಟು ಕುಂದುಕೊರತೆಗಳ ನಿವಾರಣೆಗಾಗಿ ಜನರ ಬಳಿ ಆಡಳಿತ ಕೊಂಡೊಯ್ಯಲು ಜನತಾದರ್ಶನ ಕಾರ್ಯಕ್ರಮವನ್ನು ಏಪ್ರಿಲ್ ಅಂತ್ಯದಿಂದ ಆರಂಭಿಸಲಾಗುತ್ತದೆ ಎಂದರು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಮಾತನಾಡಿ ಸರ್ಕಾರಿ ಇಲಾಖೆಗೆ ಸಂಬಂಧಿಸಿದ ಆಡಳಿತ ಪಕ್ಷಪಾತ, ತಾರತಮ್ಯ, ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬಹುದಾಗಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top